ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿ ಹೋಗಿದೆ. ರಾಜ್ಯ ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದ್ದು, ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ.

200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ.

ಭಾರತ ಹವಾಮಾನ ಇಲಾಖೆ ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ.

ʼʼಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಆಗಸ್ಟ್ 2ರಂದುಈ ಭಾಗಗಳಲ್ಲಿ ಮಳೆಯ ಪ್ರಮಾನ ಇನ್ನೂ ಹೆಚ್ಚಾಗಲಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆʼʼ ಎಂದು ಐಎಂಡಿ ತಿಳಿಸಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed