ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ಇಂದು ಸಕಲೇಶಪುರದ ಮಾನ್ಯ ಶಾಸಕರ ಸಹಕಾರದೊಂದಿಗೆ ಸಕಲೇಶಪುರದಲ್ಲಿ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರನ್ನು ಭೇಟಿ ಮಾಡಿ ಬೆಳೆಗಾರರ ಕೆಲ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಕೊಡುವಂತೆ ಮನವಿ ಮಾಡಲಾಯಿತು.

ಮನವಿ ಪತ್ರದಲ್ಲಿ ಅಡಕ ಗೊಳಿಸಲಾಗಿರುವ ಅಂಶಗಳು ಈ ಕೆಳಕಂಡಂತಿವೆ.*

2024 ನೇ ಸಾಲಿನಲ್ಲಿ ಉಂಟಾದ ಅತಿವೃಷ್ಟಿಯಿಂದ ಕಾಫಿ ಕಾಳು ಮೆಣಸು ಅಡಿಕೆ ಏಲಕ್ಕಿ ಮತ್ತು ಭತ್ತದ ಬೆಳೆಗಳಲ್ಲಿ ಅಪಾರ ನಷ್ಟ ಸಂಭವಿಸಿದ್ದು ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ನಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಮನವಿ ಮಾಡಲಾಯಿತು.

ಮಲೆನಾಡಿನ ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸಂಪೂರ್ಣವಾಗಿ ಹಿಡಿದು ಸ್ಥಳಾಂತರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಕೊಡುವಂತೆ, ಮನವಿ ಮಾಡಲಾಯಿತು.

ಬೆಳಗಾರರು ಸರ್ಕಾರಿ ಅನಧಿಕೃತ ಸಾಗುವಳಿ ಜಮೀನಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದು ಇದನ್ನು ಗುತ್ತಿಗೆ ಆಧಾರದಲ್ಲಿ ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪ್ರಗತಿಗೊಳಿಸಬೇಕೆಂದು ಮನವಿ ಮಾಡಲಾಯಿತು.

ಭೇಟಿಯಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರಾದ ಎ.ಎಸ್ ಪರಮೇಶ್ ರವರು ಗೌರವ ಕಾರ್ಯದರ್ಶಿ ಕೆ ಬಿ ಲೋಹಿತ್ ರವರು ಹಾಗೂ ಹೆಚ್ ಡಿ ಪಿ ಎ ಪಿ ಆರ್ ಎಫ್ ಅಧ್ಯಕ್ಷರಾದ ಕೃಷ್ಣಮೂರ್ತಿ ಖಂಡಿಗೆ ರವರು ಭಾಗವಹಿಸಿದ್ದರು

ವಂದನೆಗಳು ಎ.ಎಸ್ ಪರಮೇಶ್ ಅಧ್ಯಕ್ಷರು ಕೆ.ಬಿ.ಲೋಹಿತ್ ಗೌರವ ಕಾರ್ಯದರ್ಶಿ ಪದಾಧಿಕಾರಿಗಳು ನಿರ್ದೇಶಕರು ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed