ಸಕಲೇಶಪುರ : ಅತಿಯಾದ ಮಳೆಯಿಂದ ತಾಲೂಕಿನ ದೊಡ್ಡತಪ್ಪಲು ಬಳಿ ಪುನಃ ಭೂ ಕುಸಿತಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.
ಈ ಹಿಂದೆ ಎರಡು ಕಾರು ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿಕೊಮಡಿದ್ದವು ಇದೀಗ ಮತ್ತೆ ಸತತ ಮಳೆಯಿಂದ ದೊಡ್ಡತಪ್ಪಲು ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.
ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಕಂದಾಯ ಸಚಿವ ರು ವೀಕ್ಷಣೆ ಮಾಡಿದ ಬೆನ್ನಲ್ಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ.
ಸದ್ಯ ರಕ್ಷಣಾ ಕಾರ್ಯಾಚರಣೆ . ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ.
ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ.
ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ,ತಾಲೂಕು ಆಡಳಿತ, ಪೊಲೀಸ್ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.