ಸಕಲೇಶಪುರ : ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಹಾನುಬಾಳು ಕೆಪಿಎಸ್ ಪ್ರೌಢಶಾಲಾ ವಿಭಾಗದಲ್ಲಿ ಕುಸಿದಿದ್ದ ಹಳೆ ಶಾಲಾ ಕಟ್ಟಡವನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಶಿಥಿಲಗೊಂಡ ಕಟ್ಟಡವನ್ನ ತ್ವರಿತವಾಗಿ ನಿಯಮಾನುಸಾರವಾಗಿ ತೆರವುಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗೂ ಸ್ಥಳದಲ್ಲಿ ಸಂಬಂಧಪಟ್ಟ ಇಲಾಖೆ ಪಿ ಡಬ್ಲ್ಯೂ ಡಿ ಇಂಜಿನಿಯರ್ ಇಲ್ಲದ ಕಾರಣ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

ಈ ಕಾರಣ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳನ್ನು ಪ್ರಶ್ನಿಸಿದರು.

ಈ ಸಂದರ್ಭ ಸ್ಥಳದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕೆ ಆರ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅರುಣ್, ಎಚ್. ಕೆ ಉಪಾಧ್ಯಕ್ಷರಾದ ರೆಹಮಾನ್, ಸದಸ್ಯರಾದ ರವಿ, ಹಾಗೂ ಅವಿನಾಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಉಪಾಧ್ಯಕ್ಷರಾದ ಎಚ್ ಜಿ ಮೋಹನ್, ಕಾರ್ಯದರ್ಶಿಗಳಾದ ಲೋಹಿತ್, ಮತ್ತು ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೋಹನ್ ಕುಮಾರ್ ಅಚ್ಚರಡಿ, ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಅಗನಿ, ಕೃಷ್ಣ ಫೋಟೋಗ್ರಾಫರ್ ಮತ್ತು ಭೈರಪ್ಪ ಗೌಡ ಅವರೆಕಾಡು, ಹಾಗೂ ಸ್ಥಳೀಯ ಸಂಘ ಸಂಸ್ಥೆಯ ಅನೇಕ ಮುಖಂಡರುಗಳು ಹಾಗು ಪತ್ರಿಕಾ ಮಿತ್ರರು ಹಾಜರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *