ಸಕಲೇಶಪುರ : ಹಿಂದೂ ಹಿತರಕ್ಷಣಾ ಸಮಿತಿ ಸಕಲೇಶಪುರ ತಾಲ್ಲೂಕು ಇವರ ವತಿಯಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ, ಜನ ಜಾಗೃತಿಗೋಸ್ಕರ ” ನಗರದ ಹಳೇ ಬಸ್ ನಿಲ್ದಾಣದ ಹತ್ತಿರ ಮಾನವ ಸರಪಳಿ ಮಾಡುವ ಮೂಲಕ ಪ್ರತಿಭಟನೆ ಮಾಡಲಾಯಿತು.

ಇದಕ್ಕೂ ಮುನ್ನ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ನಗರದ ಹಳೇ ಬಸ್ ನಿಲ್ದಾಣದ ವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್, ಬಿ ಜೆ ಪಿ ತಾಲ್ಲೂಕು ಅಧ್ಯಕ್ಷ ಅಶ್ವಥ್, ಮಾಜಿ ಅಧ್ಯಕ್ಷ ಮಂಜುನಾಥ ಸಂಘ್ವಿ, R SS ಮುಖಂಡರುಗಳಾದ ಸತ್ಯನಾರಾಯಣ ಗುಪ್ತ, ನಂದನ್, ರವಿ ಆಟೋ, ಪೃಥ್ವಿ, ಮಾಜಿ ಬಜರಂಗದಳದ ಸಂಯೋಜಕ ವಿಜಿ ಕುಮಾರ್, ಪುರಸಭಾ ಸದಸ್ಯರಾದ ವನಜಾಕ್ಷಿ ಮಾಜಿ ಸದಸ್ಯ ಮೋಹನ್ ಹಾಗೂ ಇತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *