ಆಲೂರು : ಶಾಸಕ ಸಿಮೆಂಟ್ ಮಂಜು ರಂಭಾಪುರಿ ಶಾಖಾ ಸಂಸ್ಥಾನ ಕಾರ್ಜುವಳ್ಳಿ ಹಿರೆಮಠಾಧೀಶರಾದ ಸದಾಶಿವ ಶಿವಾಚಾರ್ಯ ಸ್ವಾಮಿ ಮತ್ತು ಸಂಕ್ಲಾಪುರ ಮಠಾಧೀಶ ಧರ್ಮರಾಜೇಂದ್ರ ಸ್ವಾಮಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಆಲೂರು-ಸಕಲೇಶಪುರ-ಕಟ್ಟಾಯ ಭಾಗದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನೆಡೆಸಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸ್ವಾತಂತ್ರ್ಯ ಪೂರ್ವದಿಂದಲೂ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿಗೆ ಮಠ ಮಾನ್ಯಗಳು ಸಾಕಷ್ಟು ಕೊಡುಗೆ ನೀಡಿವೆ. ಸನಾತನ ಧರ್ಮದ ತತ್ವಾದರ್ಶಗಳ ನೆಲೆಗಟ್ಟಿನಲ್ಲಿ ಮಠಗಳು ಇಂದಿಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಹಾನ್ ಕೊಡುಗೆ ನೀಡುತ್ತಿವೆ’ ಎಂದರು.’ಶಿಕ್ಷಣದ ಜೊತೆಗೆ ಸರ್ವ ಜಾತಿ, ಜನಾಂಗದವರ ಪ್ರೀತಿ ವಿಶ್ವಾಸದಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಂಘಟನಾತ್ಮಕ ಕೆಲಸ ಮಾಡುತ್ತಿವೆ. ಅದ್ದರಿಂದ ಮಠಗಳಿಗೆ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಸಲಹೆ ಪಡೆದಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಕಡೆ ಗಮನ ಹರಿಸುವುದರ ಜೊತೆಗೆ ಎಲ್ಲಾ ವರ್ಗದವರು ಮೆಚ್ಚುವಂತಹ ಕೆಲಸ ಮಾಡುತ್ತೇನೆ’ ಎಂದರು.ಈ ಸಂಧರ್ಭದಲ್ಲಿ ಆಲೂರು ಸಕಲೇಶಪುರ ತಾಲ್ಲೂಕಿನ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *