
ಆಲೂರು: ತಾಲೂಕಿನ ಕೆ. ಹೊಸಕೋಟೆ ಹೋಬಳಿಯ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಪ್ಲಾಂಟರ್ಸ್ ಕ್ಲಬ್ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ದೂರಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಕೆ ಪಿ ಹೇಮಂತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕೆ. ಹೊಸಕೋಟೆಯ ಎಲ್ಲಾ ಶಾಲೆಗಳ ಮಕ್ಕಳು ಭಾಗಿಯಾಗಿ ಧ್ವಜಾರೋಹಣ ಕಾರ್ಯಕ್ರದಲ್ಲಿ ಉಪಸ್ಥಿತರಿದ್ದರು.
ಪ್ಲಾಂಟರ್ಸ್ ಕ್ಲಬ್ ವತಿಯಿಂದ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿದರು. ಲಯನ್ಸ್ ಕ್ಲಬ್ ವತಿಯಿಂದ ಪೆನ್ನುಗಳನ್ನು ವಿತರಿಸಲಾಯಿತು.
ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ಹರೀಶ್ ಆಯುಧ ಮಕ್ಕಳಿಗೆ ಸಮವಸ್ತ್ರ ಹೊಲಸಿಕೊಳ್ಳಲು ಧನ ಸಹಾಯ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಮರಾವ್, ಕೊಟ್ಟೂರಪ್ಪ, ಸಿ ಆರ್ ಪಿ ಮೈಮುನ,ಎಸ್ ಕೆ ಎನ್ ಆರ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್, ಸ.ಹಿ.ಪ್ರ. ಶಾಲೆಮುಖ್ಯ ಶಿಕ್ಷಕಿ ನಾಗರತ್ನ, ಪ್ಲಾಂಟರ್ಸ್ ಕ್ಲಬ್ ಕಾರ್ಯದರ್ಶಿ ಷಣ್ಮುಖ, ಮತ್ತು ಎಲ್ಲ ಸದಸ್ಯರುಗಳು, ಲಯನ್ಸ್ ಕ್ಲಬ್ ನ ಎಲ್ಲ ಸದಸ್ಯರುಗಳು ಉಪಸ್ಥಿತರಿದ್ದರು.






