ಸಕಲೇಶಪುರ :- ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮಪಂಚಾಯಿತಿಯ ಇಬ್ಬಡಿ ಸುಳ್ಳಕ್ಕಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು.

ಬ್ಯಾಕರವಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ರಂಗನಾಥ್ ಶೆಟ್ಟಿ ತಮ್ಮ ಸ್ವಂತ ಖರ್ಚಿನಿಂದ ಶಾಲೆಯ ಕಟ್ಟಡ ಹಾಗೂ ಶಾಲೆಯ ಕಾಂಪೌಂಡ್ ಗೆ ಬಣ್ಣ ಹೊಡಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಗೆ ಮತ್ತಷ್ಟು ಮೆರುಗು ತಂದರು.

ಧ್ವಜಾರೋಹಣ ನೆರವೇರಿಸಿದ ರಂಗನಾಥ ಶೆಟ್ಟಿ ಎಲ್ಲರಿಗೂ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮಕ್ಕಳಿಂದ ದೇಶ ಅಭಿಮಾನ ಬಿತ್ತುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ನಂತರ ಸಮಾಜ ಸೇವಕರಾದ ಕಾರ್ತಿಕ್ ಅವರಿಂದ ವಿದ್ಯಾರ್ಥಿಗಳಿಗೆ ಕ್ರೀಡಾ ಸಲಕರಣೆಗಳನ್ನು ( ಸ್ಪೋರ್ಟ್ಸ್ ಕಿಟ್ ) ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿಯಾದ ಪ್ರೀತು ಸುನಿಲ್,ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಣ್ಣ ಹಾಗೂ ಎಸ್ ಡಿ ಎಂ ಸಿ ಸದಸ್ಯರು,ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಭಾಗ್ಯ,ಸದಸ್ಯರುಗಳಾದ ಅಂಬಿಕಾ, ಸರಿತಾ, ಯುವರಾಜ್ ಸುಳ್ಳಕ್ಕಿ ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *