
ಆಲೂರು: :ತಾಲೂಕಿನ ಕೆ .ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯಿತಿಯ ವತಿಯಿಂದ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಲ್ಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೇಮ ಲೋಕೇಶ್ ನೆರವೇರಿಸಿದರು.
ನಂತರ ಮಹಾತ್ಮ ಗಾಂಧೀಜಿ, ಡಾ. ಬಿಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ನಂತರ ಕೆ. ಹೊಸಕೋಟೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಅಂಗನವಾಡಿಯ ಮಕ್ಕಳು ಕೆ. ಹೊಸಕೋಟೆಯ ಮುಖ್ಯರಸ್ತೆಯಲ್ಲಿ ಮಹಾತ್ಮ ಗಾಂಧೀಜಿ ಅಂಬೇಡ್ಕರ್ ಅವರ ಫೋಟೋ ಹಿಡಿದು ಬ್ಯಾಂಡ್ ಸೆಟ್ ಬಡಿದು ಘೋಷ ವಾಕ್ಯಗಳನ್ನು ಕೂಗುತ್ತಾ ಮೆರವಣಿಗೆ ಬಂದು ಗ್ರಾಮ ಪಂಚಾಯಿತಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿದ ರಾಷ್ಟ್ರ ಧ್ವಜಕ್ಕೆ ನಮನ ಸಲ್ಲಿಸಿದರು.
ನಂತರ ಮಲ್ಲಾಪುರ ಗ್ರಾಮ ಪಂಚಾಯಿತಿ ವತಿಯಿಂದ ಪ್ರಥಮ ಬಾರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೇಮ ಲೋಕೇಶ್ ವಹಿಸಿದರು.
ಮಲ್ಲಾಪುರ ಗ್ರಾಮ ಪಂಚಾಯಿತಿ ಪಿ ಡಿ ಒ ಪರಮೇಶ್ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕ ಚಂದ್ರಶೇಖರ್ ಕಂದಾಯ ಇಲಾಖೆ, ಹರಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಯಶೋಧ, ಸಿಆರ್‌ಪಿ ಮೈಮುನ, ಮಲ್ಲಾಪುರ ಗ್ರಾಮ ಪಂಚಾಯಿತಿ ಎಫ್ ಡಿ ಎ ಎ ಪರಮೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಕುಮಾರ್, ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರು, ಎಲ್ಲಾ ಸದಸ್ಯರುಗಳು, ಸಿಬ್ಬಂದಿ ವರ್ಗದವರು, ಅಂಗನವಾಡಿಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.



