
ಸಕಲೇಶಪುರ : ನಗರದ ಅಚೀವರ್ಸ್ ಕಾಲೇಜಿನಲ್ಲಿ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗಮಾಡುತ್ತಿರುವ ಅರೆಹಳ್ಳಿಯ ಪರ್ವೀಝ್ ಅಲಿ ಹಾಗೂ ರಾಬಿಯಾ ಬಾನು ರವರ ಪುತ್ರ ಮೊಹಮ್ಮದ್ ತಾಹೆರ್ ಅಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ನಿಮಿತ್ತ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ “ಸ್ವಾತಂತ್ರ್ಯ ಪೂರ್ವ ಹಾಗೂ ನಂತರ ವಿದ್ಯಾರ್ಥಿಗಳ ಜೀವನ” ಎಂಬ ವಿಷಯಕ್ಕೆ ಸಂಬಧಿಸಿದಂತೆ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಇದೀಗ ಜಿಲ್ಲಾ ಮಟ್ಟದಲ್ಲೂ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ತಾಲೂಕಿಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾನೆ.

