ಆಲೂರು : ಕೋಲ್ಕತ್ತಾದ ಆರ್.ಜೆ.ಕರ್ ವೈದ್ಯಕೀಯ ಕಾಲೇಜಿನಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಆಲೂರು ತಾಲ್ಲೂಕು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ತಾಲ್ಲೂಕು ಅರೋಗ್ಯಧಿಕಾರಿ ಡಾ, ನಿಸಾರ್ ಪಾತಿಮಾ ಮಾತಾನಾಡಿ ಆರ್.ಜೆ.ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯನ್ನು ಕಿಡಿಕೇಡಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯಿಂದ ರಾತ್ರಿ ಕರ್ತವ್ಯ ಮತ್ತು ತುರ್ತು ವಿಭಾಗದ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಸುರಕ್ಷತೆಯ ಆತಂಕ ತಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರುಗಳ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಅಲ್ಲಿ ಪ್ರತಿಭಟನೆ ನಡೆಸುವವರಿಗೆ ರಕ್ಷಣೆ ಇಲ್ಲದಂದಾಗಿದೆ ವೈದ್ಯರು ಹಾಗೂ ಮಹಿಳೆಯರು ನಿರ್ಬಿತಿಯಿಂದ ಕೆಲಸ ಮಾಡಲು ಕಷ್ಟವಾಗುತ್ತಿದೆ ಅಲ್ಲದೆ ಆಸ್ಪತ್ರೆಗೆ ಕಿಡಿಗೇಡಿಗಳು ನುಗ್ಗಿ ಆಸ್ಪತ್ರೆಗೆ ಬೆಂಕಿ ಹಚ್ಚಿ ಪಿಟೋಪಕರಣಗಳನ್ನು ಒಡೆದು ದ್ವಂಸ ಮಾಡಿದ್ದಾರೆ ಈ ತರಹದ ಘಟನೆಗಳು ಆದರೆ ನಮಗೆ ಸುರಕ್ಷತೆ ಎಲ್ಲಿದೆ ಅನಿಸುತ್ತದೆ ಹಾಗಾಗಿ ಕೊಡಲೇ ಸರ್ಕಾರಗಳು ಹೆಚ್ಚೆತ್ತುಕೊಂಡು ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿ ,ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು.

ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಮಹತ್ವ ಕೊಡಬೇಕು. ವೈದ್ಯೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಹಾಗೂ ಇಂದು‌ ಮುಂಜಾನೆ 6 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಖಾಸಗಿ ಒಪಿಡಿ ಬಂದ್ ಆಗಿರಲಿದೆ.

ಸ್ವಾತಂತ್ರ್ಯ ಸಿಕ್ಕಿ 78 ವರ್ಷವಾದರೂ ಮಹಿಳೆಯರಿಗೆ ಸುರಕ್ಷಿತ ಇಲ್ಲ ಎಂದು ಕಿಡಿಕಾರಿದ್ದು, ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಡಾ, ರಂಗನಾಥ್ ಮಾತಾನಾಡಿ ಕೋಲ್ಕತಾದ ಆರ್.ಜಿ. ಕರ್ ವೈದ್ಯಕೀಯ ಸಂಸ್ಥೆಯ ಯುವ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ವೈದ್ಯ ವೃತ್ತಿಗೆ ಅವಮಾನತಂದಿದೆ ಮನುಷ್ಯನ ಪ್ರಾಣ ಉಳಿಸುವ ವೈದ್ಯರುಗಳನ್ನು ಬಿಡುತ್ತಿಲ್ಲ ಈಗಾಗಿ ಹಗಲು ರಾತ್ರಿ ಕೆಲಸ ನಿರ್ವಹಿಸಲು ಭಯವಾಗುತ್ತಿದೆ ಒಬ್ಬ ಹೆಣ್ಣು ಮಗುವಿನ ಮೇಲೆ ಮೂರುಸಾವಿರಕ್ಕೂ ಹೆಚ್ಚು ಜನ ಈ ಕೃತ್ಯಕ್ಕೆ ಮುಂದಾಗಿದ್ದಾರೆ ಇದನ್ನು ನಾವು ಖಂಡಿಸುತ್ತೆವೆ ಇಂದು ನಮಗೆ ತುರ್ತು ಸೇವೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ. ಇದಕ್ಕೆ ದೇಶದ್ಯಂತ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳು ಬೆಂಬಲ ಸೂಚಿಸಿ ಶನಿವಾರದಿಂದ ಭಾನುವಾರದವರೆಗೂ ಪ್ರತಿಭಟನೆಯನ್ನು ನಡೆಸುತ್ತೇವೆ ಹಾಗೂ ಕೃತ್ಯ ಹೆಸಗಿರುವ ಕಿಡಿಗೇಡಿಗಳಿಗೆ ಶಿಕ್ಷೆ ಆಗುವವರೆಗೆ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದರು.

ಈ ಪ್ರತಿಭಟನೆಯಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *