
ಸಕಲೇಶಪುರ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಹಾಸನ ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವಿಶೇಷ ಜಂಟಿ ಸಭೆಯು ಸಕಲೇಶಪುರದ ಜಿಲ್ಲಾ ಕಛೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಯವರ ಉಪಸ್ಥಿತಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು ಮಾತನಾಡಿ ಕೃಷಿ ಚಟುವಟಿಕೆ ಹಾಗೂ ಜನಜೀವನಕ್ಕೆ ಕಂಟಕವಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಕಾಡಾನೆ ದಾಳಿಯಿಂದ ಮೃತರ ಕುಟುಂಬಕ್ಕೆ ವೈಜ್ಞಾನಿಕವಾಗಿ ನ್ಯಾಯ ಸಮ್ಮತ ಪರಿಹಾರ ನಿಗದಿ ಮಾಡಬೇಕು. ಬೆಳೆ ಕಟಾವು ಸಂದರ್ಭದಲ್ಲಿ ರೈತರ ಜಮೀನುಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ಅರಣ್ಯ ಇಲಾಖೆಗೆ ತರಬೇತಿ ಹೊಂದಿದ ಅಧಿಕಾರಿಗಳು ಹಾಗೂ ಪರಿಣಿತಿ ಹೊಂದಿದ ಸಿಬ್ಬಂದಿಗಳನ್ನು ನೇಮಕವಾಗಬೇಕು. ಆನೆ ಧಾಮ ನಿರ್ಮಾಣ ಕಾರ‍್ಯ ಕೂಡಲೇ ಆರಂಭಿಸಿ ಸಕಲೇಶಪುರ ಹಾಗೂ ಆಲೂರು ಭಾಗದಲ್ಲಿ ಸಂಚರಿಸುತ್ತಿರುವ ಕಾಡಾನೆಗಳನ್ನು ಸಾಕುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಭೆಯಲ್ಲಿ ಪಕ್ಷವನ್ನು ಜಿಪಂ ತಾಪಂ ಚುನಾವಣೆಗೆ ಬಲಿಷ್ಠವಾಗಿ ಸಂಘಟಿಸಲು ಬೂತು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ನಿರ್ಧಾರ ಮಾಡಲಾಯಿತು. ಹಾಗು ಪಕ್ಷದ ಆಂತರಿಕ ಚುನಾವಣೆಯ ಅವಲೋಕನ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಅಕ್ರಮ್ ಮೌಲಾನಾ, ಹಾಸನ ನಗರ ಜಿಲ್ಲಾಧ್ಯಕ್ಷ ಸಿದ್ದೀಕ್ ಆನೆಮಹಲ್ , ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಇಮ್ರಾನ್ ಅರೇಹಳ್ಳಿ, ವಿಮೆನ್ ಇಂಡಿಯಾ ಮೂಮೆಂಟ್ ನ ಜಿಲ್ಲಾಧ್ಯೆಕ್ಷೆ ಅಫ್ರೋಜಾ ಬೇಗಂ, ಪ್ರಧಾನ ಕಾರ್ಯದರ್ಶಿ ಸಾಹಿರಾ ಬಾನು ಮತ್ತು ಜಿಲ್ಲಾ ಮುಖಂಡರು, ವಿಧಾನಸಭಾ ಮುಖಂಡರು ಉಪಸ್ಥಿತರಿದ್ದರು.
