ಬೇಲೂರು : ಸೆಪ್ಟೆಂಬರ್ ೫ ರಂದು ನಡೆಯುವ ಶಿಕ್ಷಕ ದಿನಾಚರಣೆಯನ್ನು ಬೇಲೂರು ತಾಲ್ಲೂಕು ಆಡಳಿತ ವತಿಯಿಂದ ಇದೇ ಪ್ರಥಮಬಾರಿಗೆ ಬೇಲೂರಿನಲ್ಲಿ ಶಾಲೆಗಳ ಜೊತೆಗೆ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಅದ್ದೂರಿ ಮತ್ತು ಅರ್ಥಪೂರ್ಣ ಶಿಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಬೇಲೂರು ಶಾಸಕ ಹೆಚ್.ಕೆ.ಸುರೇಶ್ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯತ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಭಾರಿ ತಾಲ್ಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ಒಟ್ಟಾಗಿ ಸೇರಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯದಲ್ಲಿಯೇ ಪ್ರಥಮ ಭಾರಿಗೆ ಶಿಕ್ಷಕರನ್ನು ಅತಿಥಿಯಾಗಿ ಆಹ್ವಾನಿಸಿದ ನಡೆಸಿದ ಕಾರ್ಯಕ್ರಮ ನಿಜಕ್ಕೂ ಮಾದರಿಯಾಗಿದೆ.

ಅಂತಯೇ ಈ ಭಾರಿ ಕೂಡ ಬಸವೇಶ್ವರ ವೃತ್ತದಿಂದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರವನ್ನು ಮೆರವಣಿಗೆ ಮೂಲಕ ಪಟ್ಟಣದ ವೀರಶೈವ ಕಲ್ಯಾಣ ಮಂಟಪದ ಬಳಿ ಬಂದ ಬಳಿಕ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಸಲಾಗುತ್ತದೆ.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಉತ್ತಮ ಶಿಕ್ಷಕರ ಪ್ರಶಸ್ತಿಯ ಅರ್ಹರಿಗೆ ಮಾತ್ರ ನೀಡಲು ಸಮಿತಿ ಕೆಲಸ ಮಾಡಬೇಕು.ಯಾರಿಂದಲೂ ದೇಣಿಗೆಯನ್ನು ಪಡೆಯಬಾರದು ಎಂದು ಕಿವಿ ಮಾತು ಹೇಳಿದ ಅವರು ಪ್ರತಿ ವೆಚ್ಚದ ಬಗ್ಗೆ ಪಾರದರ್ಶಕತೆಯನ್ನು ಶಿಕ್ಷಣ ಇಲಾಖೆ ಪಾಲಿಸಬೇಕಿದೆ.ಪ್ರತಿ ಭಾರಿ ಶಾಲಾ ನಿವೃತ್ತ ಶಿಕ್ಷಕರಿಗೆ ಮಾತ್ರ ಸನ್ಮಾನವಿತ್ತು. ಪ್ರಸ್ತುತ ನಡೆಯುವ ಕಾರ್ಯಕ್ರಮದಲ್ಲಿ ಪಿಯುಸಿ ಕಾಲೇಜಿನ ಉಪನ್ಯಾಸಕರನ್ನು ಪರಿಗಣಿಸಲಾಗಿತ್ತದೆ.ಪ್ರತಿ ಶಿಕ್ಷರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೆ ಕಾರಣವಾಗಬೇಕಿದೆ ಎಂದರು.

ಬೇಲೂರು ತಾಲ್ಲೂಕು ತಹಸೀಲ್ದಾರ್ ಎಂ.ಮಮತ ಮಾತನಾಡಿ, ಕಳೆದ ವರ್ಷ ಶಾಸಕರ ನಿರ್ದೇಶನದಂತೆ ತಾಲ್ಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ಒಟ್ಟಾಗಿ ಸೇರಿ ಶಿಕ್ಷಕರನ್ನು ಅತಿಥಿಗಳಾಗಿ ಆಹ್ವಾನಿಸಿ ಅರ್ಥಪೂರ್ಣ ಕಾರ್ಯಕ್ರಮ ನಡೆಸಿದ ಬಗ್ಗೆ ಮೆಚ್ಚುಗೆ ಪಡೆದಂತೆ ಈ ಬಾರಿ ಕೂಡ ಶಾಸಕರ ಅಧ್ಯಕ್ಷತೆಯಲ್ಲಿ ವಿಭಿನ್ನ ಶಿಕ್ಷಕರ ದಿನಾಚರಣೆ ನಡೆಸಲು ತಾವುಗಳು ಅಮೂಲ್ಯ ಸಲಹೆ ಸಹಕಾರ ನೀಡಬೇಕಿದೆ ಎಂದು ಹೇಳಿದರು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಾಲಾಕ್ಷ ಮಾತನಾಡಿ, ಪ್ರತಿ ವರ್ಷ ಶಿಕ್ಷಕರೇ ಒಟ್ಟಾಗಿ ಕೂಡಿ ಅತಿಥಿಗಳನ್ನು ಆಹ್ವಾನಿಸಿ ಕಾರ್ಯಕ್ರಮ ಬಹಳ ಬೇಗ ಕಷ್ಟದಿಂದಲೇ ಮಾಡಬೇಕಿತ್ತು. ಆದರೆ ಕಳೆದ ಭಾರಿಯಿಂದ ಬೇಲೂರಿನ ಶಾಸಕರು ಮತ್ತು ತಹಸೀಲ್ದಾರ್ ಅವರು ನಮ್ಮನ್ನು ಅತಿಥಿಗಳಾಗಿ ಅಹ್ವಾನಿಸಿ ಕಾರ್ಯಕ್ರಮ ನಡೆಸುತ್ತಿರುವುದು ನಿಜಕ್ಕೂ ಸಂತೋಷ ತಂದಿದೆ.

ಹಾಗೇಯೆ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರ ಮೆರವಣಿಗೆಯಲ್ಲಿ ಬೇಲೂರು ಚನ್ನಕೇಶವಸ್ವಾಮಿ ದೇಗುಲದಿಂದ ನಡೆಸಲು ತಾಲ್ಲೂಕು ಆಡಳಿತ ಮುಂದಾಗಬೇಕಿದೆ ಎಂದು ಸಲಹೆ ನೀಡಿದರು.

ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮತ್ತು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *