
ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ಕೆಸಗುಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳು ರಾಧಾಕೃಷ್ಣನ ವೇಷ ಧರಿಸಿ ಯಾವುದೇ ಖಾಸಗಿ ಶಾಲೆಗೂ ಕಡಿಮೆಯಿಲ್ಲ ಎಂಬಂತೆ ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಮಮತಾ,ಸಹ ಶಿಕ್ಷಕರಾದ ರಘು ಹಾಗೂ ರಮೇಶ್ ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭಕಾಮನೆಗಳು ಪರಿತ್ರಾಣಾಯ ಸಾಧುನಾಂ ವಿನಶಾಯ ಚ ದುಷ್ಕೃತಂಧರ್ಮ-ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ ಎನ್ನುತ್ತ ಜೆಡಿಎಸ್ ಮುಖಂಡರಾದ ದಿಲೀಪ್ ಕೆಸಗುಲಿ ರವರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ತಿಳಿಸಿದರು.


