
ಸಕಲೇಶಪುರ : ರಾಜ್ಯ ಹೆದ್ದಾರಿ ಅಧಿಕಾರಿಗಳನ್ನು ಕೇಳಿದರೆ ಅವರು ರೈಲ್ವೆ ಇಲಾಖೆಯತ್ತ ಕೈ ತೋರಿಸುತ್ತಾರೆ.ರೈಲ್ವೆ ಅಧಿಕಾರಿಗಳು ತಮ್ಮ ಕರ್ತವ್ಯ ಲೋಪ ಹಾಗೂ ಅದಕ್ಷತೆಯನ್ನು ಮರೆಮಾಚಲು ಇಲ್ಲಸಲ್ಲದ ನೆಪ ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ.
ಇವರಿಬ್ಬರ ಪ್ರತಿಷ್ಟೆಯ ಕಾರಣದಿಂದ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಇದೆ. ಮಂಗಳವಾರ ಸಂಜೆಯೊಳಗೆ ರಾಜ್ಯ ಹೆದ್ದಾರಿ ಹಾಗೂ ರೈಲ್ವೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನಕ್ಕೆ ಮುಂದಾಗದಿದ್ದಲ್ಲಿ ಏಕಕಾಲಕ್ಕೆ ಹೆದ್ದಾರಿ ಹಾಗೂ ರೈಲ್ವೆ ಅಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕುವುದಾಗಿ ತಾಲೂಕು ಕರವೇ ( ಪ್ರವೀಣ್ ಶೆಟ್ಟಿ ಬಣ) ಅಧ್ಯಕ್ಷರಾದ ರಮೇಶ್ ಪೂಜಾರಿ ಅಂತಿಮ ಎಚ್ಚರಿಕೆ ನೀಡಿದ್ದಾರೆ.



