ಸಕಲೇಶಪುರ : ಮುಂಬರುವ ಗೌರಿ ಗಣೇಶ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಕಲೇಶಪುರದ ವೃತ್ತ ನಿರೀಕ್ಷಕರಾದ ಜಗದೀಶ್ ರವರು ಇಂದು ಶಾಂತಿ ಸಭೆ ನಡೆಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ಯಾರೇ ಗಣಪತಿ ಪ್ರತಿಷ್ಟಾಪನೆ ಮಾಡಬೇಕಾದರೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು ನಿಗದಿತ ದಿನಗಳ ಒಳಗಾಗಿ ಗಣಪತಿಯನ್ನು ವಿಸರ್ಜನೆ ಮಾಡಬೇಕು.
ಪಿಒಪಿ ಗಣೇಶನ್ನು ಬಿಟ್ಟು ಪ್ರತಿಯೊಬ್ಬರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಟಾಪನೆ ಮಾಡುವಂತೆ ಮನವಿ ಮಾಡಿದರು.