ಸಕಲೇಶಪುರ : ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಲೋಕಾರ್ಪಣೆ ಮಹೋರ್ತ ಸದ್ಯದಲ್ಲೇ ನಿಗದಿಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ತಾಲೂಕಿನಲ್ಲಿ ಕುಂಬರಹಳ್ಳಿ ಬಳಿಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಏತ ಕಾಮಗಾರಿಗಳ ಪೂರ್ವ ಪರೀಕ್ಷಾರ್ಥ ಯಶಸ್ವಿ ಕಾರ್ಯಾಚರಣೆ ವೀಕ್ಷಿಸಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಕಾಮಗಾರಿ ಮುಗಿಯುವ ಹಂತದಲ್ಲಿದೆ ಸಣ್ಣಪುಟ್ಟ ಅಡಚಣೆಗಳಿವೆ ಇವುಗಳನ್ನು ಪೂರೈಸಿ ಯೋಜನೆ ಕಾರ್ಯಗತ ಮಾಡಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆ ಕೆಲವು ಪ್ರದೇಶಗಳಲ್ಲಿ ಅಡಚಣೆ ಮಾಡುತ್ತಿದ್ದಾರೆ ಎಂದು ನನಗೆ ಮಾಹಿತಿ ಸಿಕ್ಕಿದೆ ಅವರಿಗೆ ಭೂಮಿಯನ್ನು ಸಹ ನೀಡಲಾಗಿದೆ.

ಸ್ಥಳೀಯ ಶಾಸಕ ಸಿಮೆಂಟ್ ಮಂಜು ಸಕಲೇಶಪುರಕ್ಕೆ ಯಾವುದೇ ರೀತಿಯ ಅನುದಾನ ನೀಡುತ್ತಿಲ್ಲ ಎಂಬ ಅರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಅವರೊಂದಿಗೆ ಮಾಡುತ್ತೇನೆ ಎಂದು ಹೇಳಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *