ಸಕಲೇಶಪುರ : ತಾಲೂಕಿನ ಚಂಗಡಹಳ್ಳಿ ಗ್ರಾಮ ಪಂಚಾಯತಿಗೆ ಬಿಜೆಪಿ ಬೆಂಬಲಿತ ಕುಮಾರಸ್ವಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಅಧ್ಯಕ್ಷರು ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆ ನಡೆದು ಬಿಜೆಪಿ ಬೆಂಬಲಿತ ಕುಮಾರಸ್ವಾಮಿ 5 ಮತಗಳನ್ನು ಪಡೆದರೆ ಎದುರಾಳಿ ಪಾರ್ವತಿ 3 ಮತಗಳನ್ನು ಪಡೆದು ಪರಾಜಿತರಾಗಿದ್ದಾರೆ.

ಬಿಜೆಪಿ ಬೆಂಬಲಿತರು 4 ಸ್ಥಾನಗಳನ್ನು, ಕಾಂಗ್ರೆಸ್ ಬೆಂಬಲಿತರು 2,ಜೆಡಿಎಸ್ ಬೆಂಬಲಿತರು 2 ಸ್ಥಾನಗಳನ್ನು ಹೊಂದಿದ್ದು ಕಾಂಗ್ರೆಸ್ ನ ಒಂದು ಸ್ಥಾನವನ್ನು ಬಿಜೆಪಿ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಬಿಜೆಪಿಯ ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಮಾತನಾಡಿ ತಾಲೂಕಿನಲ್ಲಿ ಶಾಸಕ ಸಿಮೆಂಟ್ ಮಂಜುರವರ ಜನಪರ ಕೆಲಸಗಳಿಂದ ಬಿಜೆಪಿಗೆ ಉತ್ತಮ ಬೆಂಬಲ ದೊರಕುತಿದ್ದು ನಾನು ಅಧ್ಯಕ್ಷನಾದ ನಂತರ ಕ್ಯಾಮನಹಳ್ಳಿ ಗ್ರಾಮ ಪಂಚಾಯತಿ, ಟಿಎಪಿಸಿಎಮ್ಎಸ್, ಯಸಳೂರು ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಇದೀಗ ಚಂಗಡಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರ ಹಿಡಿಯಲಾಗಿದೆ.

ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಮತ್ತಷ್ಟು ಸುಭದ್ರಗೊಳಿಸಲಾಗುವುದು ಎಂದರು..

ಈ ಸಂದರ್ಭದಲ್ಲಿ ಚಂಗಡಹಳ್ಳಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಿಜೆಪಿ ಮಾಜಿ ತಾಲ್ಲೂಕು ಅಧ್ಯಕ್ಷ ಪ್ರತಾಪ್, ಬಿಜೆಪಿ ಮುಖಂಡರಾದ ಯೋಗೇಶ್, ಧರಣೇಶ್ ಮುಂತಾದವರು ಹಾಜರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *