ಹೆತ್ತೂರು : ಇಲ್ಲಿನ ಕೆಪಿಎಸ್ ಶಾಲಾ ಆಶ್ರಯದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಕ್ರಿಡಾಜ್ಯೋತಿ ಬೆಳಗುವ ಮೂಲಕ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ್ ಹಳ್ಳಿಬೈಲ್ ಉದ್ಘಾಟಿಸಿದರು.

ಧ್ವಜಾರೋಹಣವನ್ನು ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ. ನೆರವೇರಿಸಿದರೆ ಕಾರ್ಯಕ್ರಮದ ಉದ್ಘಾಟನೆಯನ್ನು ಕೆಪಿಎಸ್ ಪ್ರಾಂಶುಪಾಲ ಮಂಜುನಾಥ ಬಿ.ಡಿ. ನೆರವೇರಿಸಿದರು.

ವೇದಿಕೆಯಲ್ಲಿ ನಿವೃತ್ತ ಶಿಕ್ಷಕರಾದ ಶ್ರೀ ಸುಬ್ರಹ್ಮಣ್ಯ, ಶ್ರೀ ಲವ, ಶಾಲಾಭಿವೃದ್ದಿ ಸಮಿತಿಯ ಸದಸ್ಯರು, ಉಪ ಪ್ರಾಂಶುಪಾಲ ಭಾಸ್ಕರ್ ಬಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಸತೀಶ್ ಹೆಚ್.ಎಸ್. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಹೇಮಂತ್ ಮೊದಲಾದವರು ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ಹೆತ್ತೂರು ಹೋಬಳಿ ವ್ಯಾಪ್ತಿಯ 9 ಪ್ರೌಢಶಾಲೆಗಳು ಭಾಗವಹಿಸಿದ್ದವು. ಮಾನ್ಯ ಶಾಸಕರಾದ ಮಂಜುನಾಥ ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ ಎಸ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕುಶ್ವಂತ್ ಕೆ.ಕೆ. ಕ್ರೀಡಾಕೂಟಕ್ಕೆ ಆಗಮಿಸಿ ಶುಭ ಹಾರೈಸಿದರು.

ಶಿಕ್ಷಕಿಯರಾದ ಅಶ್ವಿನಿ ಸ್ವಾಗತಿಸಿ ಮಧುಕಲಾ ವಂದಿಸಿದರು.

ಕನ್ನಡ ಶಿಕ್ಷಕಿ ಚಿನ್ನಮ್ಮ ಕಾರ್ಯಕ್ರಮವನ್ನು ನಿರೂಪಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *