ಸಕಲೇಶಪುರ : ಶುಕ್ರವಾರ ನಗರದ ಸುಭಾಷ್ ಮೈದಾನದಲ್ಲಿ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಬೆಳಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ತ್ರೋ ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಬೆಳಗೋಡಿಗೆ ಕೀರ್ತಿ ತಂದಿದ್ದಾರೆ

ವಿಶೇಷ ಅಂದ್ರೆ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇಲ್ಲದಿದ್ದರೂ ಕೂಡ ಮಕ್ಕಳು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದಲ್ಲಿ ಎರಡು ಖಾಸಗಿ ಶಾಲೆಯ ಮಕ್ಕಳನ್ನು ಪರಾಭವಗೊಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ಬೆಳಗೋಡು ಊರಿನ ಜನರು ಶಿಕ್ಷಕರಿಗೂ ಬಾಗವಹಿಸಿದ ಎಲ್ಲ ಮಕ್ಕಳಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *