ಬೇಲೂರು : ತಾಲೂಕಿನ ಬಿಕ್ಕೊಡು ಗ್ರಾಮದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಬಿಂದಾಸ್ ಆಗಿ ಇಲ್ಲಿಯ ವಿದ್ಯಾರ್ಥಿಗಳು ಗಾಂಜಾ ವೈಟ್ನರ್ ಮದ್ಯ ಸಿಗರೇಟ್ ಸೇದುತ್ತಿರುವ ಅಪ್ರಾಪ್ತ ವಿದ್ಯಾರ್ಥಿಗಳು.

ಪೋಷಕರು ತಮ್ಮ ಮಕ್ಕಳು ಓದಿ ವಿದ್ಯಾವಂತರಾಗಲಿ ಎಂದು ಮಕ್ಕಳನ್ನು ವಿದ್ಯಾರ್ಥಿ ನಿಲಯಕ್ಕೆ ಸೇರಿಸಿರುತ್ತಾರೆ.ಆದರೆ ಕೆಲ ಕೆಟ್ಟ ವಿದ್ಯಾರ್ಥಿಗಳ ಜೊತೆ ಸೇರಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ದಿನದಲ್ಲಿ ಇಂತಹ ಕೆಲಸ ಮಾಡುವುದು ತಪ್ಪು ಕೂಡಲೇ ಎಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಹಾಗೂ ವಾರ್ಡ್ ನಗಳ ಸಭೆ ಕರೆದು ಮಾಹಿತಿಯನ್ನು ತೆಗೆದುಕೊಳ್ಳುವುದಲ್ಲದೆ ಇದರಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು.

ಹಾಸ್ಟೆಲ್ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದು ಕೊಂಡ ತಹಶಿಲ್ದಾರ್ ಎಂ ಮಮತಾ.

ಬೇರೆ ವಿದ್ಯಾರ್ಥಿಗಳು ಒಳಬರಲು ಯಾರು ಅವಕಾಶ ನೀಡಿರುವುದು ಮತ್ತು ಇಲ್ಲಿಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಈ ವಿದ್ಯಾರ್ಥಿಗಳು ಹಳೇ ವಿದ್ಯಾರ್ಥಿಗಳು ಎಂದು ಮಾಹಿತಿ ನೀಡುತ್ತಿದ್ದಾರೆ ಇದು ಮೇಲ್ನೋಟಕ್ಕೆ ಅಧಿಕಾರಿಗಳ ಸಿಬ್ಬಂದಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.ಕೂಡಲೇ ಜಿಲ್ಲಾಧಿಕಾರಿಗಳು ವಾರ್ಡ ನ್ ಸೇರಿದಂತೆ ಇತರರನ್ನು ಅಮಾನತು ಮಾಡಲು ಸೂಚನೆ ನೀಡಿದ್ದು ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಹಶಿಲ್ದಾರ್ ಎಂ ಮಮತಾ. ತಿಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *