ಅರಸೀಕೆರೆ : ರಾಜ್ಯದಲ್ಲಿಯೇ ಇತಿಹಾಸ ಪ್ರಸಿದ್ಧಿ ಪಡೆದಿರುವ ಹಾಗೂ ಶಕ್ತಿ ದೇವತೆ ಎಂದು ಭಕ್ತರ ಮನದಲ್ಲಿ ಮನೆ ಮಾಡಿರುವ ತಾಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ಶ್ರೀ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯವರ ಪ್ರತಿಷ್ಠಾಪನಾ ಮಹೋತ್ಸವ ಸೆಪ್ಟೆಂಬರ್ 6 ಶುಕ್ರವಾರ ಬೆಳಗ್ಗೆ 11:30 ರಿಂದ ಕ್ಷೇತ್ರ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗುವುದು

ಒಂದು ಮೂಲ ಸನ್ನಿಧಿಯಲ್ಲಿ ಲಿಂಗ ಪೂಜೆ ನೆರವೇರಿಸಲಾಗುವುದು ನಂತರ ಸ್ವರ್ಣ ಗೌರಮ್ಮ ದೇವಿಗೆ ಮಹಾಮಂಗಳಾರತಿ ಸಲ್ಲಿಸಿದ ಬಳಿಕ ಮಂಗಳ ಕರಡವಾದ್ಯದೊಂದಿಗೆ ಮೆರವಣಿಗೆಯಲ್ಲಿ ಸ್ವಾಮೀಜಿಯವರ ಸಮ್ಮುಖದಲ್ಲಿ ನೂತನ ದೇವಾಲಯಕ್ಕೆ ಕರೆ ತರಲಾಗುವುದು

ನಂತರ ಪೂಜೆ ಸಲ್ಲಿಸಿ ಸಿದ್ಧಪಡಿಸಿರುವ ಅಶ್ವಾರೂಢ ಪುಷ್ಪಾಲಂಕೃತ ಮಂಟಪದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ

ಈ ಸಂದರ್ಭವನ್ನು ಕಣ್ತುಂಬಿಕೊಳ್ಳಲು ತಾಲೂಕಿನ ಹಾಗೂ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯವರ ಸೇವಾ ಟ್ರಸ್ಟ್ ಅಧ್ಯಕ್ಷ ಎಂಎಸ್ ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *