
ಅರಕಲಗೂಡು: ಪಟ್ಟಣದಲ್ಲಿ ಶುಕ್ರವಾರ ಗೌರಿ ಹಬ್ಬವನ್ನು ಜನರು ಸಡಗರ ಸಂಭ್ರಮಗಳಿಂದ ಆಚರಿಸಿದರು.
ಕೋಟೆ ಕೋದಂಡರಾಮ ಪ್ರವಚನ ಮಂದಿರದಲ್ಲಿ ಸಾಮೂಹಿಕ ಗೌರಿ ಪೂಜೆ ನಡೆಸಲಾಯಿತು.
ಮಹಿಳೆಯರು ಗೌರಿ ದೇವಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿ ಸುಖ, ಸಮೃದ್ಧಿಗಾಗಿ ಪ್ರಾರ್ಥಿಸಿದರಲ್ಲದೆ ಪರಸ್ಪರ ಬಾಗಿನ ನೀಡಿ ಸಂಭ್ರಮಿಸಿದರು.
ಮನೆಗಳಲ್ಲೂ ಗೌರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.
ಗ್ರಾಮ ದೇವತೆ ದೊಡ್ಡಮ್ಮ ದೇವಾಲಯದಲ್ಲಿ ಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಜನರು ದೇವಾಲಯಕ್ಕೆ ತೆರಳಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.




