ಹಾಸನ: ನಗರದ ತಣ್ಣೀರುಹಳ್ಳ ಹಾಲುವಾಗಿಲು ರಸ್ತೆ ಬಳಿ ಇರುವ ಪ್ರತಿಷ್ಠಿತ ಹೊಯ್ಸಳ ಪಬ್ಲಿಕ್ ಶಾಲೆಯಲ್ಲಿ ಪ್ರಥಮ ಬಾರಿಗೆ ಗಣೇಶ ಪ್ರತಿಷ್ಠಾಪನೆಯನ್ನು ಶಾಲಾ ಆವರಣದಲ್ಲಿ ಮಕ್ಕಳ ಜೊತೆ ಶನಿವಾರ ಬೆಳಿಗ್ಗೆ ನೆರವೇರಿಸಿ ಸಂಭ್ರಮಿಸಿದರು.

ಹೊಯ್ಸಳ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ನವೀನ್ ಮಾಧ್ಯಮದೊಂದಿಗೆ ಮಾತನಾಡಿ, ಇಂತಹ ಗಣೇಶ ಹಬ್ಬವನ್ನು ಹೊಯ್ಸಳ ಪಬ್ಲಿಕ್ ಶಾಲೆಯಲ್ಲಿ ಶಾಲಾ ಮಕ್ಕಳೊಂದಿಗೆ ಎಲ್ಲಾರೂ ಒಗ್ಗೂಡಿ ಆಚರಿಸುತ್ತಿದ್ದೇವೆ. ಶಾಲೆಯ ಶೋಭ ನಾಗರಾಜು ಅವರ ಮಾರ್ಗದರ್ಶನದಲ್ಲಿ ಮೊದಲ ಬಾರಿಗೆ ಗಣೇಶವನ್ನು ಪ್ರತಿಷ್ಠಾಪಿಸಿದ್ದು, ಬುಧವಾರದಂದು ಮೆರವಣಿಗೆಯೊಂದಿಗೆ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಗುವುದು ಎಂದರು.

ಮುಂದಿನ ವರ್ಷ ಇಂತಹ ಹಬ್ಬವನ್ನು ಇನ್ನು ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧರಿಸಿದ್ದೇವೆ ಎಂದರು.

ಪ್ರಸ್ತೂತದಲ್ಲಿ ಮಕ್ಕಳು ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದು, ಇಂತಹ ಗಣೇಶನ ಉತ್ಸವದಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ಕೆಲ ಬದಲಾವಣೆಗೊಂಡು ಶ್ರದ್ಧೆ, ಭಕ್ತಿ ಹಾಗೂ ಏಕಾಗ್ರತೆ ಇದರಿಂದ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಹತ್ತನೆ ತರಗತಿ ಓದುತ್ತಿರುವ ವಿದ್ಯಾರ್ಥಿನಿ ರಿಫಾನ್ ಮಾತನಾಡಿ, ನಾನು ಹೊಯ್ಸಳ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಶಾಲೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಲು ಸಹಕಾರ ನೀಡಿರುವ ಶಿಕ್ಷಣ ಸಂಸ್ಥೆಯ ಶೋಭ ನಾಗರಾಜು ಅವರಿಗೆ ಧನ್ಯವಾದವನ್ನು ಮೊದಲು ಹೇಳುತ್ತೇವೆ. ಅವರ ಮಾರ್ಗದರ್ಶನದಲ್ಲಿ ಈ ಗಣಪತಿ ಮೂರ್ತಿ ಇಡಲಾಗಿದೆ. ಹಿಂದಿನ ಸ್ವಾತಂತ್ರ್ಯ ಹೋರಾಟದ ವೇಳೆ ಈ ಗಣೇಶ ಹಬ್ಬವನ್ನು ಪ್ರಾರಂಭಿಸಿ ಜನರಲ್ಲಿ ಒಗ್ಗಟ್ಟು ಮೂಡಿಸಲಾಯಿತು.

ಹಿಂದಿನ ಈ ಗಣೇಶ ಮೂರ್ತಿ ಪ್ರತಿಷ್ಠಾಪನೆ ಇಂದಿಗೂ ಕೂಡ ಸಂಭ್ರಮದಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *