ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಅದಕ್ಕಿಂತ ಮೊದಲೇ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.ರಾಜ್ಯದಲ್ಲಿ ಮಂಗಳವಾರದಿಂದ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಮೇ 31 ಮತ್ತು ಜೂನ್ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಮೇ 31 ಮತ್ತು ಜೂನ್ 1ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *