ಸಕಲೇಶಪುರ : ತಾಲೂಕಿನ ಆನೆ ಮಹಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಡಿ ಸತ್ತಿಗಾಲ ಗ್ರಾಮದ ಸರ್ಕಾರಿ ಹಿರಿಯ ಮತ್ತು ಹಿರಿಯ ಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ದೋಣಿಗಾಲ್, ಸಹಯೋಗದೊಂದಿಗೆ 2024- 25ನೇ ಸಾಲಿನ ದೋಣಿಗಾಲ್ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವು ದಿನಾಂಕ 12.09.2024 ರಂದು ಬೆಳಿಗ್ಗೆ 9:00 ಗಂಟೆಯಿಂದ ಸಿ ಡಿ ಸತ್ತಿಗಾಲ ಶಾಲಾ ಆವರಣದಲ್ಲಿ ನಡೆಯಲಿದ್ದು,
ಈ ಕಾರ್ಯಕ್ರಮಕ್ಕೆ ದೋಣಿಗಾಲ್ ಕ್ಲಸ್ಟರ್ ನ ಸಿ ಆರ್ ಪಿ ಎಲ್ಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಬಿ ಆರ್ ಪಿ ಮತ್ತು ಇ ಸಿ ಒ ಈ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ಸಿ ಡಿ ಸತ್ತಿಗಾಲ ಶಾಲೆಯ ಶಿಕ್ಷಕರು, ಪೋಷಕರು, ಹಳೆಯ ವಿದ್ಯಾರ್ಥಿಗಳು ಸಿಬ್ಬಂದಿ ವರ್ಗ ಮನವಿ ಮಾಡಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು,ಸದಸ್ಯರು ಗ್ರಾಮಸ್ಥರು ಇತರರು ಹಾಜರಿದ್ದರು.