ಸಕಲೇಶಪುರ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ರದ್ಧತಿ ಹೇಳಿಕೆ ನೀಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಸಂಸದ ರಾಹುಲ್ ಗಾಂಧಿ ವಿರುದ್ಧ ಸಕಲೇಶಪುರದಲ್ಲಿ ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನೆಡೆಸಲಾಯಿತು.
ರಾಹುಲ್ ಗಾಂಧಿ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹಗೊಳಿಸುವ ವರೆಗೂ ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ BJP , ತಾಲ್ಲೂಕು ಅಧ್ಯಕ್ಷರಾದ ಅಶ್ವಥ್, ಪುರಸಭಾ ಸದಸ್ಯರಾದ ವನಜಾಕ್ಷಿ, ರೇಖಾ ರುದ್ರ ಕುಮಾರ್, ಆನಂದ್ ಲಿಯೋ ವಾಸ್ ಇತರರು ಉಪಸ್ಥಿತರಿದ್ದರು.