ಆಲೂರು : ಪಾಳ್ಯ ಹಾಗೂ ಮಗ್ಗೆ ಮಾರ್ಗದಲ್ಲಿ ಸಂಚರಿಸುವ ಸಕಲೇಶಪುರ ವಿಭಾಗದ ಬಸ್ಸುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲಾ ಹಾಗೂ ಸಂಚಾರಕ್ಕೆ ಯೋಗ್ಯವಲ್ಲದ ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸುತ್ತಿರುವುದರಿಂದ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ಹೋಗಲಾಗುತ್ತಿಲ್ಲಾ
ಹಾಗಾಗಿ ಇನ್ನಾದರೂ ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿದ್ಯಾರ್ಥಿಗಳ ಮನವಿ ಮೇರೆಗೆ ಸಕಲೇಶಪುರ ಕೆ ಎಸ್ ಆರ್ ಟಿ ಸಿ, ವ್ಯವಸ್ಥಾಪಕರಿಗೆ ರಘು ಪಾಳ್ಯ ಕರವೇ ಹಾಸನ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ ಇವರ ಮುಖಾಂತರ ಮನವಿ ಸಲ್ಲಿಸಲಾಯಿತು