ಮಂಡ್ಯ : ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವದ ವೇಳೆ ಗಲಭೆ ನಡೆದ ಸ್ಥಳಕ್ಕೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರು, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜುರವರು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ವೀಕ್ಷಿಸಿದರು.
ಗಣೇಶೋತ್ಸವದ ಆಯೋಜಕರು ಮತ್ತು ಗಲಭೆಯಲ್ಲಿ ಹಾನಿಗೊಳಗಾದ ಅಂಗಡಿಗಳ ಮಾಲೀಕರೊಂದಿಗೆ ಮಾತನಾಡಿ ನಿಮ್ಮೊಂದಿಗೆ ನಾವಿದ್ದೇವೆ ಎನ್ನುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ್, ಕಾರ್ಯಾಲಯ ಕಾರ್ಯದರ್ಶಿ ಪ್ರಶಾಂತ್, ಎಸ್ಸಿ ಮೋರ್ಚಾ ರಾಜ್ಯ ಪದಾಧಿಕಾರಿ ದಿನಕರ್ ಬಾಬು, ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಇಂದ್ರೇಶ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಶಂಕರ್, ಇನ್ನಿತರ ಪದಾಧಿಕಾರಿಗಳು ಹಾಗೂ ಮುಖಂಡರು ಜೊತೆಗಿದ್ದರು.