ಅರಸೀಕೆರೆ : ರಾಜ್ಯದಲ್ಲಿ ಇತಿಹಾಸಿ ಪ್ರಸಿದ್ಧ ಹಾಗೂ ಶಕ್ತಿ ದೇವತೆ ಎಂದೇ ಭಕ್ತರ ಮನದಲ್ಲಿ ಮನೆ ಮಾತಾಗಿರುವ ತಾಲ್ಲೂಕಿನ ಕಣಕಟ್ಟೆ ಹೋಬಳಿ ಮಾಡಲು ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯವರ ವಿಸರ್ಜನಾ ಮಹೋತ್ಸವವು ಸೇ 17ರಂದು ಮಂಗಳವಾರ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳವರ ಸಮ್ಮುಖದಲ್ಲಿ ಮಧ್ಯಾಹ್ನ 2:30ಕ್ಕೆ ಊರ ಮುಂದಿನ ಕಲ್ಯಾಣಿಯಲ್ಲಿ ವಿಸರ್ಜಿಸಲಾಗುವುದು

ಸೆ.ಆರರಂದು ಗೌರಿ ಹಬ್ಬದಂದು ಎರೆಹಳ್ಳಿ ರಸ್ತೆ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯವರ ದೇವಾಲಯದಲ್ಲಿ ಹಾರನಹಳ್ಳಿ ಕೋಡಿಮಠದ ಉತ್ತರಾಧಿಕಾರಿ ಚೇತನ್ ಮರಿದೇವರು ಗ್ರಾಮದ ದೇವರಾದ ಚನ್ನಬಸವೇಶ್ವರ ಸ್ವಾಮಿ ಸಮ್ಮುಖದಲ್ಲಿ ಪ್ರತಿಷ್ಠಾಪಿಸಲಾಗಿತ್ತು

ಪ್ರತಿದಿನ ಸಂಪ್ರದಾಯದಂತೆ ತ್ರಿಕಾಲ ಪೂಜೆಯು ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ ದೇವಿಯ ದರ್ಶನಕ್ಕೆ ಜಾತಿ ಮತ ಭೇದವಿಲ್ಲದೆ ಸರ್ವ ಜನಾಂಗದವರು ಸಾವಿರಾರು ಭಕ್ತರು ಸರತಿ ಸಾಲಿನಂತೆ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ ವಿಶೇಷವಾಗಿ ಮುಸ್ಲಿಂ ಮಹಿಳೆಯರು ದರ್ಶನ ಪಡೆಯುತ್ತಿದ್ದಾರೆ

ಸೆಪ್ಟೆಂಬರ್ 17ರಂದು ಮುಂಜಾನೆ ದೇವಾಲಯದ ಮುಂಭಾಗ ಚಂದ್ರಮಂಡಲ ಉತ್ಸವ ಹಾಗೂ ಗೂಗ್ಗಳೋತ್ಸವ ನೂರಾರು ಮಹಿಳೆಯರು ತಲೆಯ ಮೇಲೆ ಕರ್ಪೂರ ಬಟ್ಟಲನ್ನು ಹೊತ್ತು ತಮ್ಮ ಸೇವೆ ಸಲ್ಲಿಸಲಿದ್ದಾರೆ

ಮಧ್ಯಾಹ್ನ 1:00 ನಂತರ ಕೋಡಿಮಠದ ಶ್ರೀಗಳವರ ಸಮ್ಮುಖದಲ್ಲಿ ಊರ ಮುಂದಿನ ಕಲ್ಯಾಣಿಯಲ್ಲಿ ಗೌರಮ್ಮ ದೇವಿಯನ್ನು ವಿಸರ್ಜಿಸಲಾಗುವುದು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *