
ಹಾಸನ : ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಹಾಸನ ತಾಲ್ಲೂಕು ದುದ್ದ ಹೋಬಳಿಯ ಕೆ. ಹೊಸಹಳ್ಳಿ ಗ್ರಾಮದಲ್ಲಿ ದಿನಾಂಕ ಹದಿನೈದು ಸೆಪ್ಟಂಬರ್ ಭಾನುವಾರದಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೃಷಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಂವಿಧಾನದ ಮಹತ್ವವೇನು,ಹಾಗೂ ಈ ಕಾರ್ಯಕ್ರಮದ ಉದ್ದೇಶವನ್ನು ಕೆ.ಹೊಸಹಳ್ಳಿ ಗ್ರಾಮಸ್ತರಿಗೆ ತಿಳಿಸಿದರು.
ಮತ್ತು ದೇಶದ ಅಬಿವೃದ್ಧಿಯಲ್ಲಿ ನಮ್ಮೆಲ್ಲರ ಕರ್ತವ್ಯ ಮತ್ತು ಜವಬ್ದಾರಿಗಳೇನು ಎಂಬುದನ್ನು ಹಾಗೂ ಕೃಷಿ ವಿದ್ಯಾರ್ಥಿಗಳು ತಮ್ಮ ಹಕ್ಕು ಮತ್ತು ತಮ್ಮ ಜವಬ್ದಾರಿಯಿಂದ ತಮ್ಮ ಜೀವನ ರೂಪಿಸಿಕೊಳ್ಳುವುದಲ್ಲದೆ ದೇಶದ ಅಬಿವೃದ್ಧಿಗೆ ತಮ್ಮ ಕೊಡುಗೆಗಳೇನು ಎಂಬುದನ್ನು ಅರ್ಥೈಸಿದರು.
ಹಾಗೂ ಈ ಕಾರ್ಯಕ್ರಮದಲ್ಲಿ ಎಲ್ಲಾ ಗ್ರಾಮಸ್ತರು,ಊರಿನ ಹಿರಿಯರು,ಮಕ್ಕಳು ಮತ್ತು ಕೃಷಿ ವಿದ್ಯಾರ್ಥಿಗಳು ಎಲ್ಲರು ಸೇರಿ ಸಂವಿಧಾನದ ಪೀಠಿಕೆ ಓದುವ ಮೂಲಕ ಪ್ರತಿಜ್ಞೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
