
ಸಕಲೇಶಪುರ :-ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಸವಿ ನೆನಪಿಗಾಗಿ ಕರ್ನಾಟಕ ರಾಜ್ಯದಾದ್ಯಂತ ಕರ್ನಾಟಕ ಸಂಭ್ರಮದ 50 ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸಿ ಸಂಭ್ರಮ ಆಚರಿಸುತ್ತಿದ್ದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸಕಲೇಶಪುರ ಪಟ್ಟಣಕ್ಕೆ ಅದ್ದೂರಿಯಾಗಿ, ಸಂಭ್ರಮದಿಂದ ತಾಲೂಕು ಪಂಚಾಯಿತಿ, ನಾಡ ಕಛೇರಿ, ಗ್ರಾಮ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
ಸಕಲೇಶ್ವರ ದೇವಸ್ಥಾನದಿಂದ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮುಖ್ಯ ರಸ್ತೆಯಲ್ಲಿ ನೂರಾರು ಮಹಿಳೆಯರು ಕಳಸಾ ಹೊತ್ತು ವಾದ್ಯಗೋಷ್ಠಿಗಳೊಂದಿಗೆ ದಾರಿ ಉದ್ದಲಕ್ಕೂ ವಿದ್ಯಾರ್ಥಿಗಳು ಕನ್ನಡ ಮಾತೆಗೆ ಜೈಕಾರ ಹಾಕುತ್ತಾ ಪುರಸಭೆಯವರೆಗೆ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಉಪ ವಿಭಾಗಾಧಿಕಾರಿ ಡಾ. ಶೃತಿ , ತಹಶೀಲ್ದಾರ್ ಮೇಘನಾ.ಜಿ , ಪುರಸಭೆಯ ಅಧ್ಯಕ್ಷರಾದ ಜ್ಯೋತಿ ರಾಜಕುಮಾರ, ಡಿವೈಎಸ್ಪಿ ಪ್ರಮೋದ್ ಕುಮಾರ್, ಕಸಾಪ ಕಾರ್ಯದರ್ಶಿ ಯೋಗೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಣಧಿಕಾರಿ ಗಂಗಾಧರನ್,ತಾಲ್ಲೂಕು ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ ) ಅಧ್ಯಕ್ಷರಾದ ರಮೇಶ್ ಪೂಜಾರಿ, ಪುರಸಭೆ ಉಪಾಧ್ಯಕ್ಷರಾದ ಜಾರಿನ , ಸದಸ್ಯರುಗಳಾದ ಕಾಡಪ್ಪ ಹಾಗೂ ರಮೇಶ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಜೈ ಭೀಮ್ ಮಂಜು, ಸೇರಿದಂತೆ ಕನ್ನಡ ಪರ ಹೋರಾಟಗಾರರು ನೆರೆದಿದ್ದರು.




