
ಸಕಲೇಶಪುರ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ (ರಿ.) ಸಕಲೇಶಪುರ ತಾಲ್ಲೂಕು ಘಟಕ ವತಿಯಿಂದ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ತಾಲ್ಲೂಕು ಕಚೇರಿ ಮುಂಭಾಗ ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆಯ ಅನಿರ್ದಿಷ್ಟವಾದಿ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ.
ತಾಲ್ಲೂಕು ದಂಡಾಧಿಕಾರಿ ಮೇಘನಾ ರವರಿಗೆ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಿದ್ದಲಿಂಗೇಶ್,ಕಾರ್ಯದರ್ಶಿಯಾದ ವಂದಿತಾ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.

