
ಸಕಲೇಶಪುರ : ತಾಲ್ಲೂಕಿನ ಹಾನುಬಾಳು ಗ್ರಾಮಪಂಚಾಯತಿ ವ್ಯಾಪ್ತಿಯ ಪೆಬ್ಬಲ್ಸ್ ಬೀನ್ ರೆಸಾರ್ಟ್ ನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ, ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಸಂಘ ಸಕಲೇಶಪುರ ತಾಲ್ಲೂಕು ಹಾಸನ ಜಿಲ್ಲೆ ರವರ ಸಂಯುಕ್ತ ಆಶ್ರಯದಲ್ಲಿ 2024ನೇ ವಿಶ್ವ ಪ್ರವಾಸೋದ್ಯಮ ದಿನಾಚರಣಯನ್ನು ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರೆಸಾರ್ಟ್ ಮಾಲಿಕರ ಸಂಘದ ಅಧ್ಯಕ್ಷರಾದ ಮಸ್ತಾರೆ ಲೋಕೇಶ್, ಹೋಂ ಸ್ಟೇ ಮಾಲೀಕರ ಸಂಘದ ಅಧ್ಯಕ್ಷರಾದ ಕುಮಾರಸ್ವಾಮಿ, ತಿಪ್ಪೇಸ್ವಾಮಿ ಹಾಸನ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ, ಮಾಜಿ ಶಾಸಕರಾದ ಎಚ್ ಎಮ್ ವಿಶ್ವನಾಥ್, ರೆಸಾರ್ಟ್ ಮಾಲೀಕರ ಸಂಘದ ಕಾರ್ಯದರ್ಶಿ ಕಾಡುಮಕ್ಕಿ ಹರೀಶ್, ಹಾನುಬಾಳು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಸಂತೋಷ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಪೊಲೀಸ್ ಸಿಬ್ಬಂದಿ ವರ್ಗದವರು ಹಾಗೂ ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಜರಿದ್ದರು.






