ಹಾಸನ : ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಹಾಗೂ ಬಿಟೆಕ್ ಜೈವಿಕ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಹಾಸನ ತಾಲ್ಲೂಕು ದುದ್ದ ಹೋಬಳಿಯ ಕೆ. ಹೊಸಹಳ್ಳಿ ಗ್ರಾಮದಲ್ಲಿ ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಸ್ವಚ್ಛ ಹಿ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆ. ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದು ಅತಿಥಿಯಾಗಿ ಚಂದ್ರೇಗೌಡರು ಶಿಕ್ಷಕರುಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆ ಹೊಸಹಳ್ಳಿ ಆಗಮಿಸಿದ್ದರು.
ಈ ಕಾರ್ಯಕ್ರಮದಲ್ಲಿ ಕೃಷಿ ವಿಧ್ಯಾರ್ಥಿಗಳು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಜೀವನದ ಬಗ್ಗೆ ಹಾಗೂ ಅವರು ಜೀವನದಲ್ಲಿ ಅಳವಡಿಸಿಕೊಂಡಿದ್ದ ತತ್ವಗಳ ಬಗ್ಗೆ ತಿಳಿಸಿದರು. ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಇವರು ಮಹತ್ತರ ಪಾತ್ರ ವಹಿಸಿದ್ದರು ಎಂಬುದನ್ನು ಹೇಳಿದರು.
ನಂತರದಲ್ಲಿ ಚಂದ್ರಶೇಖರ ಇವರು ಗಾಂಧಿಜೀ ಜಯಂತಿ ಆಚರಣೆ ಉದ್ದೇಶವೇನು ಎಂಬುದರ ಬಗ್ಗೆ ತಿಳಿಸಿದರು ಹಾಗೂ ಅವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮಾತ್ರ ಈ ಕಾರ್ಯಕ್ರಮಕ್ಕೆ ಒಂದು ಅರ್ಥ ಸಿಗುತ್ತದೆ ಎಂದು ತಿಳಿಸಿದರು. ಹಾಗೂ ಸ್ವಚ್ಛ ಹಿ ಸೇವಾ , ಸ್ವಭಾವ್ ಸ್ವಚ್ಛತಾ ,ಸಂಸ್ಕಾರ ಸ್ವಚ್ಛತಾ. ಇದರ ಉದ್ದೇಶವೇನು ಎಂಬುದನ್ನು ತಿಳಿಸಿದರು .
ಈ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು,ಶಿಕ್ಷಕರು,ಅಂಗನವಾಡಿ ಶಿಕ್ಷಕರು ಇವರೆಲ್ಲರ ಸಮ್ಮುಖದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.