ಸಕಲೇಶಪುರ : ಭಾರತೀಯ ಜನತಾ ಪಕ್ಷದ ಸದಸ್ಯರಾಗಲು ಜನ ಸ್ವಯಂಪ್ರೇರಿತರಾಗಿ ಆಸಕ್ತಿ ತೋರುತ್ತಿದ್ದು ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪ್ರತಿ ಮನೆಗಳಿಗೆ ಹೋಗಿ ಬಿಜೆಪಿ ಸದಸ್ಯತ್ವಕ್ಕೆ ನೊಂದಣಿ ಮಾಡಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದಲ್ಲಿ ಬಿಜೆಪಿ ಸದಸ್ಯತ್ವದ ಅಂಗವಾಗಿ ಹಲವಾರು ಮನೆಗಳಿಗೆ ಭೇಟಿ ನೀಡಿದ ಶಾಸಕರು ನಂತರ ಮಾತನಾಡಿ ಕ್ಷೇತ್ರದ ಜನ ಕಾಂಗ್ರೆಸ್‌ನ ಆಡಳಿತದಿಂದ ಭ್ರಮನಿರಸನಗೊಂಡಿದ್ದಾರೆ.

ಎತ್ತಿನಹೊಳೆ ಯೋಜನೆಯಿಂದ ಮಲೆನಾಡು ಭಾಗಕ್ಕೆ ವ್ಯಾಪಕ ನಷ್ಟವಾಗಿದ್ದು ಈ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು ಸಹ ಯಾವುದೆ ಪ್ರಯೋಜನವಾಗಿಲ್ಲ. ಬಿಜೆಪಿ ಶಾಸಕರಿದ್ದರೆಂದೆ ಸರ್ಕಾರ ಹೆಚ್ಚಿನ ಅನುದಾನ ಕೊಡಲು ಮುಂದಾಗಿಲ್ಲ. ಇದರಿಂದಾಗಿ ಕ್ಷೇತ್ರದ ಅಭಿವೃದ್ದಿಗೆ ಹಿನ್ನೆಡೆಯಾಗುತ್ತಿದೆ. ಜನ ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಕಾಂಗ್ರೆಸ್‌ನ ಆಡಳಿತದಿಂದ ಬೇಸತ್ತಿರುವ ಜನ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರಾಗಲು ಆಸಕ್ತಿ ತೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ 50000ಕ್ಕೂ ಹೆಚ್ಚು ಮಂದಿಯನ್ನು ಪಕ್ಷಕ್ಕೆ ನೊಂದಣಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಸುರೇಶ್, ರಘುರಾಂ, ಶಂಕರ್, ಸುರ್ವಣ ಸುರೇಶ್, ಸ್ವರ್ಣ ರಘುರಾಂ,ಕುಸುಮ ಪ್ರಕಾಶ್ , ಮಂಗಳ ಶ್ಯಾಮ್, ಮುಂತಾದವರು ಹಾಜರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed