ಹಾಸನ : ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಜಿಲ್ಲೆ ಮತ್ತು ಎ.ಪಿ.ಜೆ. ಪದವಿ ಪೂರ್ವ ಕಾಲೇಜು ಹಾಸನ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 5/10/2024 ರಂದು ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಕಲೇಶಪುರ ಆಕ್ಸ್‌ಫರ್ಡ್ ಇಂಗ್ಲೀಷ್ ಶಾಲೆಯ ಆನ್‌ಶೆಲ್ ವೈಗಸ್ ಮತ್ತು ಶಮಾ ಹರ್ಮೈನ್ ಇವರಿಬ್ಬರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಹಾಗೂ ಆಕ್ಸ್‌ಫರ್ಡ್ ಇಂಗ್ಲೀಷ್ ಶಾಲೆಯ – ಶೃಷಾನ್ ಎನ್.ಎಸ್ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಮೊಹಮ್ಮದ್ ಖಲಂದರ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳನ್ನು ಮತ್ತು ತರಬೇತುದರರಾದ ಖಲಂದರ್ ಬಾಬರವರನ್ನು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವರ್ಗ ಅಭಿನಂದನೆಯನ್ನು ಸಲ್ಲಿಸಿದೆ.