ಹಾಸನ: ಜಿಲ್ಲೆಗೆ ರೈಲುಗಳ ಮೂಲಕ ಮಾದಕ ಪದಾರ್ಥ ಸರಬರಾಜಾಗುತ್ತಿರುವ ಮಾಹಿತಿಯಿದ್ದು, ರೈಲ್ವೆ ಪೊಲೀಸರು ಏನು ಮಾಡುತ್ತಿದ್ದಾರೆ? ಕೂಡಲೇ ಕ್ರಮವಹಿಸಬೇಕೆಂದು ಸಂಸದ ಶ್ರೇಯಸ್ ಎಂ.ಪಟೇಲ್ ಸಭೆಯಲ್ಲಿ ಹರಿಹಾಯ್ದರು.
ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಸೋಮವಾರ ನಡೆದ ತಮ್ಮ ಅಧ್ಯಕ್ಷತೆಯ ಪ್ರಥಮ ದಿಶಾ (ಮೊದಲನೇ/ಎರಡನೇ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ) ಸಭೆಯ ಆರಂಭದಲ್ಲೇ ಡ್ರಗ್ಸ್ ಹಾವಳಿ ಬಗ್ಗೆ ಪ್ರಸ್ತಾಪಿಸಿದ ಅವರು ರೈಲ್ವೆ ಪೊಲೀಸರ ಕಾರ್ಯವೈಖರಿಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.