ಬೇಲೂರು : ನೆನ್ನೆ ರಾತ್ರಿ ಸುರಿದ ಮಳೆಯ ಕಾರಣದಿಂದಾಗಿ ಪೋನ್ನಥಪುರ ಗ್ರಾಮದಲ್ಲಿ ಮನೆ ಕುಸಿದು ಕೂದಲೆಳೆ ಅಂತರದಲ್ಲಿ ಕುಟುಂಬ ಪಾರಾದ ಘಟನೆ ನಡೆದಿದೆ.

ಬೇಲೂರು ತಾಲೂಕಿನ ಹಳೇಬೀಡು ಹೋಬಳಿ ಯಲಹಂಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೋನ್ನಥಪುರ ಕಾಲೋನಿಯ ಮರಿಯಮ್ಮ ಕುಮಾರಸ್ವಾಮಿ ದಂಪತಿಗಳಿಗೆ ಸೇರಿದ ಮನೆಯಲ್ಲಿ ಎಂದಿನಂತೆ ಊಟ ಮುಗಿಸಿ ಮಲಗಿದ್ದ ವೇಳೆ ರಾತ್ರಿ ಸುಮಾರು 12 ಗಂಟೆಯ ಸಮಯದಲ್ಲಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದ್ದು ಕುಟುಂಬ ಸದಸ್ಯರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *