
ಸಕಲೇಶಪುರ : ನಗರದಲ್ಲಿ ಇಂದು ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಶನಿವಾರ ಸಂಜೆ ನಗರದಲ್ಲಿ ಹಮ್ಮಿಕೊಂಡಿದ್ದ ಪಥ ಸಂಚಲನ ನೆರೆದಿದ್ದವರ ಕಣ್ಮನ ಸೆಳೆಯಿತು.
500ಕ್ಕೂ ಹೆಚ್ಚು ಗಣ ವೇಷಧಾರಿಗಳು ನಗರದ ಮುಖ್ಯ ಬೀದಿಗಳಲ್ಲಿ ಘೋಷ ವಾದ್ಯಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು.
ರಸ್ತೆಯ ಅಕ್ಕ ಪಕ್ಕ ನಿಂತಿದ್ದ ಸಾರ್ವಜನಿಕರು ಸಂಚಲನದಲ್ಲಿ ಭಾಗಿಯಾದ ಸ್ವಯಂ ಸೇವಕರಿಗೆ ರಂಗೋಲಿ, ಪುಷ್ಪಗಳಿಂದ ಅಲಂಕರಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.





