
ಸಕಲೇಶಪುರ : ತಾಲೂಕು ಆಡಳಿತ ತಾಲೂಕು ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.
ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಡಾ.ಶೃತಿ ಎಂ.ಕೆ., ತಹಸೀಲ್ದಾರ್ ಮೇಘನಾ, ತಾಲೂಕು ಡಿವೈಎಸ್ಪಿ ಪ್ರಮೋದ್ ಕುಮಾರ್, ಪುರಸಭಾ ಅದ್ಯಕ್ಷೆ ಜ್ಯೋತಿ ರಾಜಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಆದಿತ್ಯ,ಪುರಸಭೆ ಮುಖ್ಯಾಧಿಕಾರಿ ನಟರಾಜು ಇದ್ದರು.
