ಸಕಲೇಶಪುರ : ವೀಕೆಂಡ್ ಬಂತೆಂದರೆ ಸಾಕು ಸಕಲೇಶಪುರದ ಮಂಜರಾಬಾದ್ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರು ದೋಣಿಗಾಲ್ ವೃತ್ತದ ಹಾಗೂ ಪಕ್ಕದಲ್ಲೇ ಇರುವ ರಾಜ್ಯ ಹೆದ್ದಾರಿ (ಹೆತ್ತೂರು ರಸ್ತೆ) ಯಲ್ಲಿ ವಾಹನಗಳನ್ನು ಬೇಕಾಬಿಟ್ಟಿ ನಿಲ್ಲಿಸುತ್ತಿದ್ದು,ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿ ಈ ರಸ್ತೆಯಲ್ಲಿ ದಿನ ನಿತ್ಯ ಓಡಾಡುವ ಶಾಲಾ ಮಕ್ಕಳು,ಗರ್ಭಿಣಿ ಬಾಣಂತಿ ಸ್ತ್ರೀಯರು,ಹಾಗೂ ಸ್ಥಳೀಯ ನಿವಾಸಿಗಳಿಗೆ ಗಂಟೆಗಟ್ಟಲೆ ರಸ್ತೆಯಲ್ಲಿ ನಿಲ್ಲ ಬೇಕಾದ ಪರಿಸ್ಥಿತಿ ಉಂಟಾಗಿ ಚಿತ್ರ ಹಿಂಸೆ ಅನುಭವಿಸುವಂತಾಗಿದೆ..

ಹಾಗಾಗಿ ಈ ಸಮಸ್ಯೆಗೆ ಪರಿಹಾರ ಸಿಗುವ ತನಕ ಮಂಜರಾಬಾದ್ ಕೋಟೆಯನ್ನೇ ಬಂದ್ ಮಾಡಿ…

ಇಲ್ಲವೇ ಹೆತ್ತೂರು ರಸ್ತೆಯಲ್ಲಿ ವಾಹನ ನಿಲ್ಲಿಸದಂತೆ ಕ್ರಮ ಕೈಗೊಂಡು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು ಜನಸ್ನೇಹಿ ಅಧಿಕಾರಿಗಳಾಗಿ ಎಂಬ ಮನವಿಯನ್ನು 19-10-24 ರಂದು ದೋಣಿಗಾಲ್ ಸರ್ಕಲ್ನಲ್ಲಿ ಬೆಳಗ್ಗೆ 11:30 ಕ್ಕೆ ಪ್ರತಿಭಟನೆಯನ್ನು ಹಮ್ಮಿ ಕೊಂಡಿದ್ದೇವೆ..

ಆನೆಮಹಲ್ ಹಾಗೂ ಕ್ಯಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ನಿವಾಸಿಗಳು ಹಾಗೂ ಕೆಲವು ಸಂಘಟನೆಗಳು ಈ ಪ್ರತಿಭಟನೆಗೆ ಸಹಕಾರ ನೀಡುತ್ತಿದ್ದಾರೆ.

ಅದೇ ರೀತಿ ಈ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ವಿಫಲವಾದರೆ ಮುಂದಿನ ದಿನದಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತೇವೆಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಮಂಜುದೇವ್ ಹುಲ್ಲಹಳ್ಳಿ ಮಲೆನಾಡು ರಕ್ಷಣಾ ಸೇನೆ ನಿಯೋಜಿತ ಜಿಲ್ಲಾ ಕಾರ್ಯದರ್ಶಿ ಹಾಗೂಪ್ರತಾಪ್ ಹುಲ್ಲಹಳ್ಳಿಕ್ಯಾನಳ್ಳಿ ಗ್ರಾಮಪಂಚಾಯಿತಿ ಉಪಾಧ್ಯಕ್ಷರು ಆಗ್ರಹಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *