ಸಕಲೇಶಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಕಲೇಶಪುರ ರವರಿಂದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ)ಬೆಳ್ತಂಗಡಿ, ಜಿಲ್ಲಾ ಜನ ಜಾಗೃತಿ ವೇದಿಕೆ ಹಾಸನ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗಡೆ ಹಾಗೂ ಮಾತೃಶ್ರೀ ಡಾ. ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ ಇಂದು ನಂದೀಶ್ವರ ಸಮುದಾಯ ಭವನ ಯಸಳೂರಿನಲ್ಲಿ ನವಜೀವನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದಂತಹ ಮಾಧವ್ ನಾಯಕ್ ರವರು ದೀಪ ಬೆಳಗಿಸುವುದರ ಮೂಲಕ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಪುರುಷೋತ್ತಮ್.ಕೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಗಿರೀಶ್, ಮಂಜುನಾಥ್, ಸಮಿತಿ ಸದಸ್ಯರಾದ ಮುರುಗೇಂದ್ರ, ಪುಟ್ಟೇಗೌಡ, ಪುಷ್ಪ ಜಗನ್ನಾಥ ಹಾಗೂ ಮೇಲ್ವಿಚಾರಕರಾದ ಅನಂದ ಡಿ.ಎಂ ಸೇವಾ ಪ್ರತಿನಿಧಿಗಳು, ನವ ಜೀವನ ಸಮಿತಿ ಸದಸ್ಯರು, ಕುಟುಂಬ ಸದಸ್ಯರು ಹಾಗೂ ಸ್ಥಳೀಯರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *