ಹಾಸನ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಹಾಸನ ತಾಲ್ಲೂಕು ಘಟಕದ ವತಿಯಿಂದ ಮಹೀಳಾ ಸದಸ್ಯರ ಸಭೆಯನ್ನು ದಿನಾಂಕ 21-10-2024 ರ ಸೋಮವಾರ ಸಂಜೆ ಹಾಸನ ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದ ಶ್ರೀ ಬಸವೇಶ್ವರ ದೇವಾಲಯದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್ ಮಾತನಾಡಿ ದಿನಾಂಕ 23-10-2024 ರಂದು ಹಾಸನದಲ್ಲಿ. ಹಾಸನ ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ರವರ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ವೀರಶೈವ ಲಿಂಗಾಯತ ಸಮಾಜದವರು ಸಾರ್ವಜನಿಕರು ಪಾಲುಗ್ಗೊಳ್ಳುವಂತೆ ತಿಳಿಸಿದರು.

ಅಂದು ಬೆಳಿಗ್ಗೆ 10- ಘಂಟೆಗೆ ಹಾಸನ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಿಂದ ಬೆಳ್ಳಿ ರಥದಲ್ಲಿ ರಾಣಿ ಚೆನ್ನಮ್ಮ ರವರ ಪೋಟೋ ಮೇರವಣಿಗೆ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಹಾಗೂ ಹಾಸನ ನಗರದಲ್ಲಿ ಮೇರವಣಿಗೆ ಮೂಲಕ ಕಲಾಭವನದ ವರೆಗೆ.ರಥಯಾತ್ರೆ ಮೇರವಣೀಗೆಯಲ್ಲಿ ಹಾಗೂ ಕಲಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿಳಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಕ್ಕೆ ಹೆಚ್ಚೀನ ಸಂಖ್ಯೆಯಲ್ಲಿ ಸದಸ್ಯರಾಗಬೇಕೇಂದು ತಿಳಿಸಿದರು . ಹಾಗೂ ಮುಂದೆ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹೀಳಾ ಘಟಕವನ್ನು ರಾಜ್ಯ ಸಮೀತಿ ಯಿಂದ ಪತ್ರ ಬಂದ ಮೇಲೆ ರಚಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ನಿರ್ದೇಶಕರಾದ ಗೀತಾ ಸ್ವಾಮಿ, ಜಿಲ್ಲಾ ಮಹೀಳಾ ಘಟಕದ ಮಾಜಿ ಅಧ್ಯಕ್ಷರಾದ ಶೋಭಾ ಮಹೇಶ್. ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷರಾದ ಲೀಲಾ ಧರ್ಮಪ್ಪ, ಮಹೀಳಾ ಘಟಕದ ಮೈತ್ರಿ ವೀನಯ್, ಶುಭಾಲತೇಶ್, ನಾಗರತ್ನ ಯೋಗೀಶ್, ಇಂದ್ರ ಸತೀಶ್. ಶ್ವೇತ, ಮತ್ತೀತರರು ಉಪಸ್ಥಿತರಿದ್ದರು.ಸಭೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹೀಳಾ ಘಟಕದವರು ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್ ರವರನ್ನು ಸನ್ಮಾನಿಸಿದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *