ಸಕಲೇಶಪುರ : ಕಳೆದ ಕೆಲವು ತಿಂಗಳುಗಳಿಂದ ಐತಿಹಾಸಿಕ ಮಂಜ್ರಾಬಾದ್ ಕೋಟೆ ವೀಕ್ಷಣೆ ಮಾಡಲು ಬರುವ ಪ್ರವಾಸಿಗರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಸಮಸ್ಯೆ ಉಲ್ಬಣಗೊಂಡು ಈ ಭಾಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಟ್ರಾಫಿಕ್ ಸಮಸ್ಯೆಯನ್ನು ಅನುಭವಿಸುತ್ತಿದ್ದ ಹಿನ್ನಲೆಯಲ್ಲಿ ಕೆಲವು ಸಂಘಟನೆಗಳು ಇತ್ತಿಚೀಗೆ ಪ್ರತಿಭಟನೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ ಮೇರೆಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಉಪವಿಭಾಗಾಧಿಕಾರಿ ಎಂ.ಕೆ.ಶೃತಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಪ್ರವಾಸಿಗರಿಗೆ ವಾಹನ ನಿಲ್ಲಿಸಲು ಸ್ಥಳಾವಕಾಶ ಇಲ್ಲದ ಕಾರಣ ರಸ್ತೆಯ ಎರಡು ಬದಿಗಳಲ್ಲಿ ಮತ್ತು ಎಲ್ಲೆಂದಲ್ಲಿ ವಾಹನಗಳನ್ನು ನಿಲುಗಡೆ ಮಾಡುವ ದೃಷ್ಟಿಯಿಂದ ಸಮಸ್ಯೆ ತಲೆದೋರಿದೆ ತಕ್ಷಣಕ್ಕೆ ಬರುವಂತೆ ರಾಜ್ಯ ಹೆದ್ದಾರಿ 27 ರ ಸೋಮವಾರ ಪೇಟೆ ಹೆತ್ತೂರಿಗೆ ಹೋಗುವ 200 ಮೀಟರ್ ರಸ್ತೆಯನ್ನು ವಾಹನ ನಿಲುಗಡೆಗೆ ನಿಷೇಧವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಮೇಘನಾ, ಡಿವೈಎಸ್ಪಿ ಪ್ರಮೋದ್ ಕುಮಾರ್, ಕಂದಾಯ ನಿರೀಕ್ಷಕ ಬಾನುಪ್ರಕಾಶ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಕರಾದ ಹರೀಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ,ಮಲೆನಾಡು ರಕ್ಷಣಾ ಸೇನೆ ರಾಜ್ಯಾದ್ಯಕ್ಷ ಸಾಗರ್ ಜಾನೆಕೆರೆ, ಇತರರು ಇದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *