
ಸಕಲೇಶಪುರ : ಪಟ್ಟಣದಲ್ಲಿನವೆಂಬರ್ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನಿಸಲು ತಾಲೂಕು ಆಡಳಿತ ಅರ್ಜಿಗಳನ್ನು ಆಹ್ವಾನಿಸಿದ್ದು ವಿವಿದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಇರುವ ಕಾರಣ ಈ ಸಂಬಂದ ಸಕಲೇಶಪುರ ತಾಲ್ಲೂಕಿನಲ್ಲಿ ದಿನಾಂಕ: 01.11.2024 ರಂದು ಬೆಳಿಗ್ಗೆ 10.00 ಗಂಟೆಗೆ ತಾಲ್ಲೂಕು ಕ್ರೀಡಾಂಗಣ, ಸುಭಾಷ್ ಮೈದಾನ, ಸಕಲೇಶಪುರದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು,
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನಿಯ ಸೇವೆ ಸಲ್ಲಿಸಿದ 5 ಜನರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸನ್ಮಾನ ಮಾಡಲು ತೀರ್ಮಾನಿಸಲಾಗಿದ್ದು, ಅರ್ಹ ವ್ಯಕ್ತಿಗಳು ದಿನಾಂಕ: 28.10.2024 ರೊಳಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಕಲೇಶಪುರ ಇಲ್ಲಿಗೆ ತಮ್ಮ ಗಣನೀಯ ಸೇವೆಗಳ ಸಂಕ್ಷಿಪ್ತ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ವಿವಿಧ ಸೇವೆ ಸಲ್ಲಿಸಿರುವ ಸಾಧಕರು ಅರ್ಜಿಗಳನ್ನು ಸಲ್ಲಿಸಬೇಕಾಗಿ ಈ ಮೂಲಕ ಕೋರಿದೆ.
