
ಸಕಲೇಶಪುರ:- ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಿ.ಆರ್.ಸಿ ಶಿಕ್ಷಣ ಇಲಾಖೆ ಸಕಲೇಶಪುರ ಇವರ ಅಧ್ಯಕ್ಷತೆಯಲ್ಲಿ 2023-24 ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 2023-2024 ನೇ ಸಾಲಿನ 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋದನಾ ಗ್ರಾಮ ಸಭೆಯನ್ನು ನೆಡೆಸಲಾಯಿತು.
ಈ ಸಭೆಯ ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಸಾಕಷ್ಟು ಸಾರ್ವಜನಿಕರ ಹಣ ದುರ್ಬಳಕೆ ಆಗಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಲೆಕ್ಕ ಪರಿಶೋಧನೆ ಶುರುವಾಗುತ್ತಿದ್ದಂತೆ ಗ್ರಾಮಸ್ಥರು ಪಂಚಾಯತಿ ವ್ಯಾಪ್ತಿ ಹಲವು ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅನುದಾನದಲ್ಲಿ ವಳಲಹಳ್ಳಿಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದ್ದು, ಹಣ ಬಿಡುಗಡೆಯಾದರೂ ಸಹ ಉದ್ಯೋಗ ಚೀಟಿ ಹೊಂದಿದವರ ಖಾತೆಗೆ ಹಣ ಜಮ ಮಾಡದೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಗುತ್ತಿಗೆದಾರರ ನಡುವೆ ವೈಯಕ್ತಿಕ ಜಗಳದಿಂದ ಕಟ್ಟಡ ನಿರ್ಮಾಣ ಪೂರ್ಣಗೊಂಡಿದರು ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಮಾಡಲು ಸಾಧ್ಯವಾಗುತ್ತಿಲ್ಲ.
ಅಲ್ಲದೆ ಕೆಲವು ವೈಯಕ್ತಿಕ ಕಾಮಗಾರಿಗಳನ್ನು ಸರಿಯಾದ ಫಲಾನುಭವಿಗಳಿಗೆ ನೀಡದೆ ತಮಗೆ ಬೇಕಾದವರಿಗೆ ನೀಡುವ ಮೂಲಕ ಅಧಿಕಾರ ದುರುಪಯೋಗಗೊಳಿಸಿದ್ದು ಎಲ್ಲಾ ಪಂಚಾಯತಿ ಅಧ್ಯಕ್ಷರು ಸದಸ್ಯರ ಬಗ್ಗೆ ತನಿಖೆ ನಡೆಸಬೇಕೆಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗಾಲ ಗ್ರಾಮದ ರಸ್ತೆ ಮೋರಿ ನಿರ್ಮಾಣದಲ್ಲಿ ಭ್ರಷ್ಟಾಚಾರ ಅಗಿದ್ದೂ ಹಾಗೂ ಗ್ರಾಮ ಸಭೆ ನಡೆಸಲು ಪಂಚಾಯಿತಿಯವರು ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ಕಾಟಚರಕ್ಕೆ ನಡೆಸಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಇದೇ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಕೆ. ಪಿ ಕೃಷ್ಣೆಗೌಡ, ದಲಿತ ಸಂಘದ ಮುಖಂಡರಾದ ವಳಲಹಳ್ಳಿವೀರೇಶ್, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರುದ್ರೇಶ್ ವಳಲಹಳ್ಳಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮಂಜಮ್ಮ ತಿಪ್ಪೇಸ್ವಾಮಿ, ಶ್ರೀಕಾಂತ್ ಹೊಸಳ್ಳಿ, , ವಳಲಹಳ್ಳಿ ಸಹಕರಿ ಸಂಘದ ನಿರ್ದೇಶಕರಾದ ಹಿರಿದನಹಳ್ಳಿ ಹೂವಣ್ಣ, ಬಿ ಎಂ ಆದರ್ಶ ಸೇರಿದಂತೆ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು


