
ಸಕಲೇಶಪುರ : ನಗರದ ಲಯನ್ಸ್ ಭವನದಲ್ಲಿ ಏರ್ಪಡಿಸಲಾಗಿದ್ದ ಭಾರತೀಯ ಜನತಾ ಪಾರ್ಟಿ ಸಕಲೇಶಪುರ ಮಂಡಲದ ಪರಿಶಿಷ್ಟ ಜಾತಿ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಎನ್ ಮಹೇಶ್ ಅಂದು ಕೇಂದ್ರ ಸರ್ಕಾರದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ಮುಂಬೈಗೆ ಅಂಬೇಡ್ಕರ್ ದೇಹ ಸಾಗಿಸಲು ಸಹಕಾರ ನೀಡಲಿಲ್ಲ. ಅಂಬೇಡ್ಕರ್ ಸ್ನೇಹಿತರು ತಮ್ಮ ಸ್ವಂತ ಕಾರನ್ನು ಮಾರಿ ಬಂದ ಹಣದಲ್ಲಿ ಅಂತ್ಯಕ್ರಿಯೆ ನಡೆಸಿದ್ದರು ಎಂದರು.
ಈ ಸಂದರ್ಭದಲ್ಲಿ ಪಕ್ಷ ತೊರೆದು ಹಲವು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂಧರ್ಭದಲ್ಲಿ ಶಾಸಕರಾದ ಸಿಮೆಂಟ್ ಮಂಜುನಾಥ್,ತಾಲೂಕು ನೂತನ ಎಸ್ಸಿ ಮೋರ್ಚಾ ಅಧ್ಯಕ್ಷ ಸ್ಟೀವನ್ ಪ್ರಕಾಶ್, ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಚಂದ್ರು, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ತಾಲೂಕು ತಾಲೂಕು ಮಂಡಲ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಾಜಿ ಕಾರ್ಯಧ್ಯಕ್ಷ ಜಂಬರಡಿ ಲೋಹಿತ್, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷೆ ಶ್ವೇತಾ ಪ್ರಸನ್ನ, ನಿಕಟ ಪೂರ್ವ ಅಧ್ಯಕ್ಷ ಲೋಕೇಶ್ ಜಾನೇಕೆರೆ ಸೇರಿದಂತೆ ತಾಲೂಕು ಪದಾಧಿಕಾರಿಗಳು ವಿವಿಧ ಮೋರ್ಚಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.






