ಹಾಸನ : ಗ್ರಾಮೀಣಾ ಕೃಷಿ ಕಾರ್ಯಾನುಭವ ಶಿಬಿರದಲ್ಲಿರುವ ಹಾಸನದ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಸನ ತಾಲೂಕಿನ ದುದ್ದ ಹೋಬಳಿಯ ಕೋರವಂಗಲ ಗ್ರಾಮದಲ್ಲಿ   ‘ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಅಭಿಯಾನ ಹಮ್ಮಿಕೊಂಡಿದ್ದರು.

ಈ ಅಭಿಯಾನದ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಬೇಕೆಂಬ ಉದ್ದೇಶವನ್ನು  ವಿದ್ಯಾರ್ಥಿಗಳು ತಿಳಿಸಿದ್ದಾರೆ.ಡಾ.ಕೆ. ಎನ್.ಮುನಿಸ್ವಾಮಿಗೌಡ, ಡೀನ್ (ಕೃಷಿ) ಕೃಷಿ ಮಹಾವಿದ್ಯಾಲಯ ಕಾರೇಕೆರೆ, ಹಾಸನ ಅವರು ಮಾತನಾಡಿ ನಾವು ವೃಕ್ಷವನ್ನು ಕಾಪಾಡಿದರೆ ವೃಕ್ಷ ನಮ್ಮನ್ನು ಕಾಪಾಡುತ್ತದೆ ಎಂದು ಪರಿಸರದ ರಕ್ಷಣೆಯಲ್ಲಿ ವೃಕ್ಷದ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟರು.

ತಾಯಿಯ ಹೆಸರಿನಲ್ಲಿ ಗಿಡ ನೆಡುವುದರಿಂದ ಗಿಡದ ಜೊತೆ ಭಾವನಾತ್ಮಕ ಸಂಬಂಧ ಸೃಷ್ಟಿಯಾಗುತ್ತದೆ ಎಂದು ಗ್ರಾಮಸ್ಥರಿಗೆ ಮನವರಿಕೆ ಮಾಡಿಸಿದರು. ವೃಕ್ಷಗಳ ಸಂಖ್ಯೆಯನ್ನು ಹೆಚ್ಚಿಸುವುದರಲ್ಲಿ ಯುವಕರು ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಅವರು ಹೇಳಿದರು.

ಉಳಿದ ಗಣ್ಯರೊಂದಿಗೆ ಸೇರಿ ಒಂದು ಗಿಡವನ್ನು ನೆಡುವುದರ ಮೂಲಕ ಅವರು ಅಭಿಯಾನಕ್ಕೆ ಚಾಲನೆ ಕೊಟ್ಟರು.

ಕುಮಾರಸ್ವಾಮಿ, ಮುಖ್ಯೋಪಾಧ್ಯಾಯರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋರವಂಗಲ.ಕೃಷಿ ಮಹಾವಿದ್ಯಾಲಯ ಕಾರೇಕೆರೆ, ಹಾಸನ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು , ಕೃಷಿ ವಿದ್ಯಾರ್ಥಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋರವಂಗಲದ ಶಾಲಾ ಮಕ್ಕಳು ಹಾಗೂ ಕೋರವಂಗಲದ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *