
ಹಾಸನ : ನಗರದ ಎನ್.ಆರ್. ವೃತ್ತದ ಬಳಿ ಇರುವ ಪುನೀತ್ ರಾಜಕುಮಾರ್ ಪ್ರತಿಮೆ ಬಳಿ ಪುನೀತ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಖಿಲ ಕರ್ನಾಟಕ ಡಾ. ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಅಭಿಮಾನಿಗಳು ಪುನೀತ್ ರಾಜಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈಸಂದರ್ಭದಲ್ಲಿ ವಿವೇಕರಾಜು, ರಘು ಸೇರಿದಂತೆ ಇತರರು ಉಪಸ್ಥಿತರಿದ್ದರು.


